12:36 AM Thursday16 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮಾರ್ಚ್ 17: ಪುನೀತ್ ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕರ್ನಾಟಕ ಜಾನಪದ ಅಕಾಡೆಮಿಯಿಂದ ನೇತ್ರದಾನ, ರಕ್ತದಾನ ಶಿಬಿರ

09/03/2022, 10:30

ಮಂಗಳೂರು(reporterkarnataka.com): ಕರ್ನಾಟಕ ಜಾನಪದ ಪರಿಷತ್, ಕೋಸ್ಟಲ್ ವುಡ್ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರ ಒಕ್ಕೂಟ, ಲಯನ್ಸ್ ಕ್ಲಬ್,ವೆನ್ಲಾಕ್ ಜಿಲ್ಲಾಸ್ಪತ್ರೆ ಹಾಗೂ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ
ಆಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್  ಅವರ ಜನ್ಮ ದಿನವಾದ ಮಾರ್ಚ್ 17ರಂದು ಬೃಹತ್ ನೇತ್ರದಾನ, ರಕ್ತದಾನ ಶಿಬಿರ ನಗರದ ಪುರಭವನದಲ್ಲಿ  ನಡೆಯಲಿದೆ.

ಇಲ್ಲಿನಾವು ಜೀವನವನ್ನು ಸಾರ್ಥಕ ಮಾಡಲು, ನಮ್ಮ ಮೆದುಳು ಸಾವಿನ ನಂತರ ಅಂಗಾಂಗಗಳನ್ನು ದಾನ ಮಾಡುವ ವಾಗ್ದಾನ ಮಾಡಲು ಒಂದು ಅವಕಾಶವಿದೆ.

ಕಲಾವಿದರು, ಅಭಿಮಾನಿಗಳು, ಕಲಾ ಪೋಷಕರು ಎಲ್ಲರೂ ಒಂದಾಗಿ  ರಕ್ತದಾನ ಹಾಗೂ ಸ್ವಇಚ್ಚೆಯಿಂದ ನೇತ್ರ ದಾನದ ವಾಗ್ದಾನ ಮಾಡುವ ಮೂಲಕ  ಕಾರ್ಯಕ್ರಮ ಯಶಸ್ವಿ ಗೊಳಿಸೋಣ ಎಂದು ಕರ್ನಾಟಕ ಜನಪದ ಅಕಾಡೆಮಿ ದ.ಕ. ಜಿಲ್ಲಾಧ್ಯಕ್ಷ ಪಮ್ಮಿ ಕೊಡಿಯಾಲ್ ಬೈಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು