7:32 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸ್ಕೇಟಿಂಗ್ ಪಟು‌ ಅನಘಾ ರಾಜೇಶ್ ಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ: ಕಿರು ವಯಸ್ಸಿನಲ್ಲಿ ಅತ್ಯುನ್ನತ ಸಾಧನೆ

09/03/2022, 13:39

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ಮಹಿಳಾ‌ ಮತ್ತು ಮಕ್ಕಳ‌ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಮಂಗಳೂರು ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ  ನಡೆದ ಅಂತಾರಾಷ್ಟ್ರೀಯ ಮಹಿಳಾ‌ ದಿನಾಚರಣೆ-2022 ಕಾರ್ಯಕ್ರಮದಲ್ಲಿ ಕ್ರೀಡಾ ಕ್ಷೇತ್ರದಲ್ಲಿ  ಅತ್ಯುನ್ನತ ಸಾಧನೆ ಮಾಡಿ ಪ್ರಥಮ ಸ್ಥಾನ ಪಡೆದ ಸ್ಕೇಟಿಂಗ್ ಪಟು ಅನಘಾ ರಾಜೇಶ್ ಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಅಸಾಧಾರಣ ಪ್ರತಿಭೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಜಿಲ್ಲಾ ಪಂಚಾಯತ್ ಸಿಇಓ ಡಾ.ಕುಮಾರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ತನ್ನ ನಾಲ್ಕನೇ ವಯಸ್ಸಿನಲ್ಲಿ ಸ್ಕೇಟಿಂಗ್ ತರಬೇತಿ ಆರಂಭಿಸಿ ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಒಟ್ಟು 26 ಚಿನ್ನದ ಪದಕ,11 ಬೆಳ್ಳಿ ಪದಕ ಹಾಗೂ 8 ಕಂಚಿನ ಪದಕ‌ ಪಡೆದು ತನ್ನ 12 ನೇ ವಯಸ್ಸಿನಲ್ಲೇ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಮಂಗಳೂರಿನ‌ ಕದ್ರಿ‌ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾಗಿರುವ‌ ಅನಘಾ ರಾಜೇಶ್ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನ 6ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಅಂತಾರಾಷ್ಟ್ರೀಯ ಸ್ಕೇಟಿಂಗ್ ಕೋಚ್ ಪ್ರತೀಕ್ ರಾಜ ಅವರಿಂದ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು