12:06 PM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಕೊರೊನಾ ನಿಯಂತ್ರಣ: ಮಾರ್ಚ್ 27 ರಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನರಾರಂಭ

09/03/2022, 16:26

ಹೊಸದಿಲ್ಲಿ(reporterkarnataka.com):ಅಂತಾರಾಷ್ಟ್ರೀಯ ವಿಮಾನ ಯಾನ  ಮಾರ್ಚ್ 27ರಿಂದ ಪುನರಾರಂಭಗೊಳ್ಳಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ನಾಗರಿಕ ವಿಮಾನಯಾನ ಸಚಿವಾಲಯ, ನಿಯಮಿತ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳು ಮಾರ್ಚ್ 27ರಿಂದ ಪುನರಾರಂಭಗೊಳ್ಳಲಿವೆ.

ಇನ್ನು ವಿದೇಶಿ ಆಗಮನ ಮತ್ತು ನಿರ್ಗಮನಕ್ಕಾಗಿ ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಪರಿಣಾಮಕಾರಿಯಾದ ಪ್ರಮಾಣಿತ ಕಾರ್ಯಾಚರಣೆ ಕಾರ್ಯವಿಧಾನಗಳನ್ನು ಅನುಸರಿಸಲಿವೆ’ ಎಂದಿದೆ.

ಕೋವಿಡ್-19 ಪ್ರಕರಣಗಳಲ್ಲಿ ನಿರಂತರ ಕುಸಿತವನ್ನು ಗಮನದಲ್ಲಿಟ್ಟುಕೊಂಡು, ಕೊರೊನಾ ವೈರಸ್ ನಿಂದಾಗಿ ಎರಡು ವರ್ಷಗಳ ವಿರಾಮದ ನಂತರ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳನ್ನು ಪುನರಾರಂಭಿಸುವ ನಿರ್ಧಾರವನ್ನು ನಾಗರಿಕ ವಿಮಾನಯಾನ ಸಚಿವಾಲಯ ತೆಗೆದುಕೊಂಡಿದೆ.

ಅಂದ್ಹಾಗೆ, ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ 2020 ರ ಮಾರ್ಚ್ 23 ರಿಂದ ಭಾರತದಲ್ಲಿ ನಿಗದಿತ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಆದಾಗ್ಯೂ, ಜುಲೈ 2020 ರಿಂದ ಭಾರತ ಮತ್ತು ಸುಮಾರು 40 ದೇಶಗಳ ನಡುವೆ ಬಯೋ ಬಬ್ಬಲ್‌ ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಪ್ರಯಾಣಿಕರ ವಿಮಾನಗಳು ಕಾರ್ಯನಿರ್ವಹಿಸುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು