8:09 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೃಷ್ಣರಾಜಪೇಟೆ: ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ; ಎಲ್ಲೆಡೆ ಸಂಭ್ರಮ- ಸಡಗರ

09/03/2022, 17:56

ಮಂಡ್ಯ(reporterkarnataka.com):
ಕೃಷ್ಣರಾಜಪೇಟೆ ತಾಲೂಕಿನ ಹೊಸಹೊಳಲು ಗ್ರಾಮದ ಪುರಾಣ ಪ್ರಸಿದ್ಧವಾದ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ಬ್ರಹ್ಮರಥೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. ಗೋವಿಂದ, ವೆಂಕಟರಮಣ, ನಮೋ ನಾರಾಯಣ, ನಮೋ ವೆಂಕಟೇಶ ಎಂಬ ಜಯಘೋಷಗಳು ಮುಗಿಲು ಮುಟ್ಟಿದ್ದವು.


ಪುರಸಭೆಯ ಅಧ್ಯಕ್ಷೆ ಮಹಾದೇವಿ ನಂಜುಂಡ, ಉಪಾಧ್ಯಕ್ಷೆ ಗಾಯತ್ರಿ ಸುಬ್ಬಣ್ಣ, ತಹಶೀಲ್ದಾರ್ ಎಂ.ವಿ.ರೂಪಾ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಶೋಕ್ ಅವರು ರಥದಲ್ಲಿ ವಿರಾಜಮಾನವಾಗಿದ್ದ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.


ಕೋವಿಡ್  ಹಿನ್ನೆಲೆಯಲ್ಲಿ ರಥೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು. ತಹಶೀಲ್ದಾರ್ ರೂಪಾ ರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಹಬ್ಬ ಹರಿದಿನಗಳು ಹಾಗೂ ರಥೋತ್ಸವಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿವೆ. ಹಬ್ಬದ ಸಂಭ್ರಮದಲ್ಲಿ ಎಲ್ಲರೂ ಒಂದಾಗಿ ಭಗವಂತನ ನಾಮಸ್ಮರಣೆ ಮಾಡಿದಾಗ ಮನಸ್ಸಿಗೆ ಶಾಂತಿ ನೆಮ್ಮದಿಯು ದೊರೆಯುವ ಜೊತೆಗೆ ಸಾರ್ಥಕತಾ ಭಾವನೆಯು ಮೂಡುತ್ತದೆ ಎಂದು ಹೇಳಿದರು..


ಪುರಸಭೆಯ ಮುಖ್ಯಾಧಿಕಾರಿ ಕುಮಾರ್, ಸದಸ್ಯರಾದ ಹೆಚ್.ಆರ್.ಲೋಕೇಶ್, ಹೆಚ್.ಡಿ.ಅಶೋಕ್, ಶಾಮಿಯಾನ ತಿಮ್ಮೇಗೌಡ, ಗಿರೀಶ್, ಕೆ.ಆರ್.ಹೇಮಂತ್ ಕುಮಾರ್, ಡಿ.ಪ್ರೇಮಕುಮಾರ್, ರವೀಂದ್ರಬಾಬು, ಕಲ್ಪನಾದೇವರಾಜು, ಶೋಭಾ, ‌ರಾಜಸ್ವ ನಿರೀಕ್ಷಕಿ ಚಂದ್ರಕಲಾ, ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಸಮಾಜಸೇವಕರಾದ ಕೆ.ಜಿ.ಸೋಮಶೇಖರ್ ಸೇರಿದಂತೆ ಸಾವಿರಾರು ಜನರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು