2:07 PM Tuesday26 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಸಂತೇಬಾಚಹಳ್ಳಿಗೆ ಜಿಲ್ಲಾಧಿಕಾರಿ ಅಶ್ವಥಿ ಭೇಟಿ: ಬಸ್ ನಿಲ್ದಾಣ ಸ್ಥಳ ಪರಿಶೀಲನೆ; ಅಂಗನವಾಡಿಗೆ ಭೇಟಿ

09/03/2022, 18:41

ಮಂಡ್ಯ(reporterkarnataka.com):
ಕೃಷ್ಣರಾಜಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಶಾಲಾ ಜಾಗದಲ್ಲಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡುತ್ತಿರುವ ಸ್ಥಳವನ್ನು ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರು ಗ್ರಾಮಸ್ಥರೊಂದಿಗೆ ಪರಿಶೀಲನೆ ನಡೆಸಿದರು.


ಸಂತೆಬಾಚಹಳ್ಳಿ ಗ್ರಾಮದಲ್ಲಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಬೇಕೆಂಬ ಜಾಗವು ವಾಸ್ತವವಾಗಿ ಶಿಕ್ಷಣ ಇಲಾಖೆಗೆ ಸೇರಿದ್ದರೂ ಆ ಜಾಗದಲ್ಲಿ ಯಾವುದೇ ಶೈಕ್ಷಣಿಕ ಚಟುವಟಿಕೆಗಳು ನಡೆಯದೇ ಶಾಲಾ ಕಟ್ಟಡವು ಸಂಪೂರ್ಣವಾಗಿ ಶಿಥಿಲವಾಗಿದ್ದು ಕುಸಿದು ಬೀಳುವ ಹಂತದಲ್ಲಿದೆ. ಈ ಜಾಗದಲ್ಲಿ ಖಾಲಿ ಉಳಿದಿರುವ 31 ಗುಂಟೆ ಜಾಗವನ್ನು ಬಸ್ ನಿಲ್ದಾಣದ ನಿರ್ಮಾಣಕ್ಕೆ ಶಿಕ್ಷಣ ಇಲಾಖೆಯಿಂದ ರಾಜ್ಯ ರಸ್ತೆಸಾರಿಗೆ ಸಂಸ್ಥೆಗೆ ಹಸ್ತಾಂತರ ಮಾಡಲು ಕ್ರಮಕೈಗೊಂಡರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂಬ ವಿಚಾರವನ್ನು ಸಾರ್ವಜನಿಕರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಪ್ರಸ್ತುತ ಶಾಲೆಗೆ ಎರಡೂವರೆ ಎಕರೆ ವಿಶಾಲವಾದ ಜಾಗವಿದ್ದು ಆ ಜಾಗದಲ್ಲಿ ಶಾಲೆ ಹಾಗೂ ಆಟದ ಮೈದಾನವಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿದೆ. ಆದ್ದರಿಂದ ಶಾಲೆಗೆ ಸೇರಿರುವ ಜಾಗದಲ್ಲಿ 31 ಗುಂಟೆ ಜಾಗವನ್ನು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬಸ್ ನಿಲ್ದಾಣ ನಿರ್ಮಿಸಲು ಶಾಲಾಭಿವೃದ್ಧಿ ಸಮಿತಿಯು ಒಪ್ಪಿಗೆ ನೀಡಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಮೋಹನ್ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಜಿಲ್ಲಾಧಿಕಾರಿ ಅಶ್ವಥಿ ಅವರು ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ ಸಧ್ಯ ಶಾಲೆಯ ಶೈಕ್ಷಣಿಕ ಚಟುವಟಿಕೆಗಳು ನಡೆಯದ ಹಿನ್ನೆಲೆಯಲ್ಲಿ ಖಾಲಿಯಿದ್ದು ವ್ಯರ್ಥವಾಗಿ ಉಳಿದಿರುವ ಜಾಗವನ್ನು ಬಸ್ ನಿಲ್ದಾಣ ನಿರ್ಮಿಸಲು ಅಗತ್ಯ ಕ್ರಮ ಕೈಗೊಂಡು ಹಸ್ತಾಂತರ ಮಾಡುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು.


ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ವಿ.ರೂಪಾ, ಬಿಇಓ ಬಸವರಾಜು, ತಾಲ್ಲೂಕು ಬಿಸಿಎಂ ಅಧಿಕಾರಿ ವೆಂಕಟೇಶ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಮಹೇಶ್,  ಸಂತೇಬಾಚಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಮೋಹನ್, ಟಿಎಪಿಸಿಎಂಎಸ್ ಮಾಜಿಅಧ್ಯಕ್ಷ ಕೊಡಗಹಳ್ಳಿ ಜಯರಾಮೇಗೌಡ, ಮುಖಂಡರಾದ ಮರೀಗೌಡ, ಮಾಳಗೂರು ಚಂದ್ರಶೇಖರ್, ಕುಮಾರಸ್ವಾಮಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಂಗಸ್ವಾಮಿ, ಶರಥ್, ಗಿರೀಶ್, ಮುಖ್ಯ ಶಿಕ್ಷಕಿ ಮಂಜುಳಾ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು