12:41 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಪಚ್ಚನಾಡಿ ಘನತ್ಯಾಜ್ಯ ಸ್ಥಳಾಂತರ ಕಾಮಗಾರಿಗೆ ಸಿಎಂ ಅನುಮೋದನೆ: ಹೈಕೋರ್ಟ್ ಗೆ ರಾಜ್ಯ ಸರಕಾರ ಸ್ಪಷ್ಟನೆ

09/03/2022, 23:19

ಬೆಂಗಳೂರು(reporterkarnataka.com) ಮಂಗಳೂರಿನ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಎರಡು ವರ್ಷಗಳ ಹಿಂದೆ ಭೀಕರ ತ್ಯಾಜ್ಯ ದುರಂತ ಸಂಭವಿಸಿದ ಬಳಿಕ ರಾಜ್ಯಾದ್ಯಂತ ಸುದ್ದಿ ಮಾಡಿದ  ಪಚ್ಚನಾಡಿ ಘನತ್ಯಾಜ್ಯ ಘಟಕದಲ್ಲಿ ಕೆಲವು ದಶಕಗಳಿಂದ ಸಂಗ್ರಹವಾಗಿರುವ ಘನತ್ಯಾಜ್ಯ ಸ್ಥಳಾಂತರಿಸುವ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.

ಪಚ್ಚನಾಡಿ ಘನತ್ಯಾಜ್ಯ ಸ್ಥಳಾಂತರಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು 73 ಕೋಟಿ ರೂ.ಗಳ ಯೋಜನೆಗೆ ಅನುಮೋದನೆ ನೀಡಿದ್ದಾರೆ ಎಂದು ಸರಕಾರದ ಪರ ವಾದಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರು ಹೈಕೋರ್ಟ್ ಪೀಠಕ್ಕೆ ತಿಳಿಸಿದರು.

ಘನತ್ಯಾಜ್ಯ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಭರ್ತಿಯಾಗಿ ನಡೆದ ತ್ಯಾಜ್ಯ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಸಲಾಯಿತು.

ಸಿಎಂ ಅನುಮೋದನೆ ನೀಡಿದ ಕುರಿತಂತೆ ಪ್ರಮಾಣ ಪತ್ರ ಸಲ್ಲಿಸಬೇಕು. ಪಚ್ಚನಾಡಿ ಘನತ್ಯಾಜ್ಯ ಸ್ಥಳಾಂತರ ಬಗ್ಗೆ ಕಾಲಕಾಲಕ್ಕೆ ವರದಿಯನ್ನು ಸಲ್ಲಿಸಬೇಕೆಂದು ಹೈಕೋರ್ಟ್ ತಿಳಿಸಿದೆ. 


ಅರ್ಜಿಯ ಮುಂದಿನ ವಿಚಾರಣೆಗೆ ಮಂಗಳೂರು ಪಾಲಿಕೆ ಆಯುಕ್ತರು ಹಾಜರಾಗುವ ಅವಶ್ಯಕತೆ ಇಲ್ಲ ಎಂದು ನ್ಯಾಯಪೀಠ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು