10:31 AM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ನಿಮ್ಮ ಮಾನಸಿಕ ಒತ್ತಡಗಳನ್ನು ತಂದೆ- ತಾಯಿ, ಆಪ್ತರಲ್ಲಿ ಹಂಚಿಕೊಳ್ಳಿ: ಸಿಐ ಗೋಪಾಲಕೃಷ್ಣ ಭಟ್ 

10/03/2022, 00:06

ಮಂಗಳೂರು(reporterkarnataka.com): ಕೆನರಾ ಕಾಲೇಜ್‌ನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶೇಷ ಜಾಗೃತಿ ಅಪರಾಧ ತಡೆ ಸುರಕ್ಷತಾ ಕ್ರಮಗಳು ಕಾರ್ಯಾಗಾರ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕದ್ರಿ ಠಾಣಾ ವೃತ್ತ ನಿರೀಕ್ಷಕರಾದ ಗೋಪಾಲಕೃಷ್ಣ ಭಟ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ನಿಮ್ಮ ಸಹಪಾಠಿಗಳಿಗೆ ವಿಪರೀತ ಚೇಷ್ಟೆ ಅಥವಾ ಹೀಯಾಳಿಸುವುದು ಇತ್ಯಾದಿ ಮಾಡಬಾರದು. ಇಂತಹ ಎಷ್ಟೋ ಪ್ರಕರಣಗಳಲ್ಲಿ ಅದೆಷ್ಟೋ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ನೀವು ಇನ್ನೊಬ್ಬರ ಸಾವಿಗೆ ಕಾರಣರಾಗಬೇಡಿ ಎಂದರು.

ಮೊಬೈಲ್ ಹಾಗೂ ಇತರ ತಾಂತ್ರಿಕ ಸಾಧನಗಳಿಂದ ನಿಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ, ಈ ವಯ್ಯಸ್ಸಿನಲ್ಲಿ ಮನಸ್ಸು ಚಂಚಲವಾಗಿದ್ದು, ಅದನ್ನು ಸ್ತಿಮಿತದಲ್ಲಿಟ್ಟು ಭವಿಷ್ಯದ ಏಳಿಗೆಗೆ ತುಡಿಯುವಂತೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ಅದೇ ರೀತಿ ಸಂಚಾರದ ಸಂದರ್ಭ ಸಾಹಸದ ಬಲೆಗೆ ಬೀಳದೆ ಜಾಗರೂಕರಾಗಿ ದ್ವಿಚಕ್ರ ವಾಹನಗಳನ್ನು ಓಡಿಸಿ, ಹದಿಹರೆಯದ ಆಸೆಗಳಿಗೆ ವಿಪರೀತ ಒತ್ತು ಕೊಟ್ಟು ಜೀವ ಕಳೆದುಕೊಳ್ಳಬೇಡಿ, ನಿಮ್ಮ ಪ್ರಾಣ ನಿಮ್ಮ ಹೆತ್ತ ತಂದೆ ತಾಯಿಗಳ ಭವಿಷ್ಯವನ್ನೆ ಬರಿದುಗೊಳಿಸಬಹುದು ಹಾಗೆಯೆ ದೇಶಕ್ಕೂ ನಷ್ಟವನ್ನು ತಂದೊಡ್ಡಬಹುದು, ಯುವಕರೇ ನಮ್ಮ ದೇಶದ ಆಸ್ತಿಯಾಗಿದ್ದೀರಿ ಎಂದ ಅವರು ಪೋಲಿಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಅಪರಾಧ ಮಾಡಿ ತಪ್ಪಿಸಿಕೊಂಡರು ಪೋಲಿಸರಗೇನು ನಷ್ಟ ಇಲ್ಲ ಅದರಿಂದ ನಿಮ್ಮ ಅಮೂಲ್ಯ ಜೀವನವೇ ಹಾಳಾಗುತ್ತದೆ ಎನ್ನುವುದನ್ನು ಮಾತ್ರ ಮರೆಯಬೇಡಿ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳಾದ ಸೀಮಾ ಪ್ರಭು, ವಾಣಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು