ಇತ್ತೀಚಿನ ಸುದ್ದಿ
ವಿವಿ ಕಾಲೇಜು ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆರಂಭೋತ್ಸವ
10/03/2022, 21:08
ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆರಂಭೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಅನುಸೂಯ ರೈ ವಹಿಸಿದ್ದರು. ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಸೌಕರ್ಯಗಳನ್ನು ಉಪಯೋಗಿಸಿ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಕಾಲೇಜಿನಿಂದ ನಿರ್ಗಮಿಸುವಾಗ ಜವಾಬ್ದಾರಿಯುತ ನಾಗರಿಕರಾಗಿ ಹೊರಹೊಮ್ಮಬೇಕು ಎಂದು ಕರೆ ನೀಡಿದರು.
ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ಜಯವಂತ ನಾಯಕ್ ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವಿದ್ಯಾರ್ಥಿಗಳು ದಿನನಿತ್ಯದ ಕಲಿಕೆಯ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನ ನೀಡಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ವಿಭಾಗದ ಉಪನ್ಯಾಸಕರಾದ ಡಾ. ರಾಮಕೃಷ್ಣ ಬಿ.ಎಂ, ಶಮಾ ಹಾಗೂ ಮಧುರ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ತರುವಾಯ ದ್ವಿತೀಯ ತರಗತಿಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಘಟಿಸಿದರು. ನಿಶಿತ್ ಅವರು ಸ್ವಾಗತಿಸಿದರು ಹಾಗೂ ಇರ್ಷಾದ್ ಅವರು ಧನ್ಯವಾದ ಸಮರ್ಪಿಸಿದರು. ದ್ವಿತೀಯ ವರ್ಷದ ವಿದ್ಯಾರ್ಥಿ ಪ್ರಜ್ಞಾ ನಾಯಕ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದ ವು.