4:21 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆ ಮತ ಎಣಿಕೆ: ಗದ್ದುಗೆ ಯಾರಿಗೆ?; ಮಧ್ಯಾಹ್ನ ಸ್ಪಷ್ಟ ಚಿತ್ರಣ ಸಾಧ್ಯತೆ

10/03/2022, 10:41

ಹೊಸದಿಲ್ಲಿ(reporterkarnataka.com): ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನ 12 ಗಂಟೆ ವೇಳೆ ಸ್ಪಷ್ಟ ಚಿತ್ರಣಗಳು ಲಭ್ಯವಾಗುವ ಸಾಧ್ಯತೆಗಳಿವೆ.

ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಜಾಬ್ ರಾಜ್ಯಗಳಲ್ಲಿ ನಡೆದ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಚುನಾವಣೆಗಳ ಫಲಿತಾಂಶಗಳು ಅತ್ಯಂತ ಮಹತ್ವ ಪಡೆದುಕೊಂಡಿದೆ.

ಹೀಗಾಗಿ ಸಾಕಷ್ಟು ರಾಜಕೀಯ ಹೈಡ್ರಾಮಗಳಿಗೆ ವೇದಿಯಾಗಿದ್ದ ಪಂಜಾಬ್ ಫಲಿತಾಂಶ ಸಾಕಷ್ಟು ಕುತೂಹಲ ಕೆರಳಸಿದೆ.

ಪಂಚರಾಜ್ಯಗಳ​​ ವಿಧಾನಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಎಣಿಕೆ ಕೇಂದ್ರಗಳ ಸುತ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರವರೆಗೆ 7 ಹಂತಗಳಲ್ಲಿ ನಡೆದ ವಿಧಾನಸಭಾ ಚುನಾವಣೆ ನಡೆಯಿತು. 403 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಒಟ್ಟು 4,441 ಅಭ್ಯರ್ಥಿಗಳ ಭವಿಷ್ಯವನ್ನು ಇಂದಿನ ಫಲಿತಾಂಶ ನಿರ್ಧರಿಸುತ್ತದೆ.

ಪಂಜಾಬ್ ಚುನಾವಣೆಯಲ್ಲಿ ಒಟ್ಟು 117 ಕ್ಷೇತ್ರಗಳಲ್ಲಿ 1304 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಈ ಬಾರಿ ಪಂಜಾಬ್ ಮತದಾರರು ಮತದಾನಕ್ಕೆ ಹೆಚ್ಚು ಉತ್ಸಾಹ ತೋರಿದ್ದು ಕಂಡು ಬಂದಿರಲಿಲ್ಲ.

ಗೋವಾ ರಾಜ್ಯವು ಫೆ.14ರಂದು ಒಂದೇ ಹಂತದಲ್ಲಿ ಮತ ಚಲಾಯಿಸಿತು. ಗೋವಾದಲ್ಲಿ 40 ಸ್ಥಾನಗಳಿದ್ದು, 332 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್-ಜಿಎಫ್‌ಪಿ ತಲಾ 40 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಆಮ್ ಆದ್ಮಿ ಪಕ್ಷದಿಂದ 39 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಉತ್ತರಾಖಂಡ ವಿಧಾನಸಭೆಯ 70 ಸ್ಥಾನಗಳ ಮತ ಎಣಿಕೆ ನಡೆಯಲಿದೆ. ಒಟ್ಟು 632 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮಣಿಪುರದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, 60 ಸ್ಥಾನಗಳ ವಿಧಾನಸಭೆಗೆ 265 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು