5:58 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಚೀನಾದಲ್ಲಿ ಮತ್ತೆ ಕೊರೋನಾ ಹಾವಳಿ ; ಮತ್ತೆ ಲಾಕ್ ಡೌನ್ !!

11/03/2022, 21:22

ReporterKarnataka.com

ಕೊರೊನಾ ವೈರಸ್ಸಿನ ಒಮೈಕ್ರಾನ್ ತಳಿಯ ಪರಿಣಾಮ ಚೀನಾದಲ್ಲಿ ಕೋವಿಡ್ ಸೋಂಕು ಅತಿ ವೇಗವಾಗಿ ವ್ಯಾಪಿಸುತ್ತಿದೆ ಎಂದು ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ ಸೋಂಕಿತರ ತ್ವರಿತ ಪತ್ತೆಗಾಗಿ ರ‍್ಯಾ‍ಪಿಡ್‌ ಆಯಂಟಿಜೆನ್‌ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಚೀನಾ ಸರ್ಕಾರ ಹೇಳಿದೆ.
ಇ ಮೂಲಕ ಸೋಂಕಿತರ ಪತ್ತೆಗಾಗಿ ಇದೇ ಮೊದಲ ಬಾರಿ ಚೀನಾ ರ‍್ಯಾ‍ಪಿಡ್‌ ಆಯಂಟಿಜೆನ್‌ ಪರೀಕ್ಷೆ ಮೊರೆ ಹೋದಂತಾಗಲಿದೆ.

ಆನ್‌ಲೈನ್ ಮತ್ತು ಇನ್ನಿತರ ಮಾರಾಟದ ವೇದಿಕೆಗಳ ಮೂಲಕ ಜನ ಸಾಮಾನ್ಯರು ಸಹ ಕೋವಿಡ್ ಪರೀಕ್ಷಾ ಕಿಟ್‌ಗಳನ್ನು ಖರೀದಿಸಬಹುದಾಗಿದೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.

ಮತ್ತೊಂದೆಡೆ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ 90 ಲಕ್ಷ ಜನರಿರುವ ಉತ್ತರದ ನಗರದ ಮೇಲೆ ಲಾಕ್‌ಡೌನ್ ಹೇರಲಾಗಿದೆ. ಜತೆಗೆ ಕೊರೊನಾ ನಿಯಂತ್ರಣಕ್ಕಾಗಿ ಶಾಂಘೈನಲ್ಲಿ ಶಾಲೆಗಳನ್ನು ಮುಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಚ್ 10ರಂದು ಚೀನಾದಲ್ಲಿ 528ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಕಂಡುಬಂದಿವೆ.

ಇತ್ತೀಚಿನ ಸುದ್ದಿ

ಜಾಹೀರಾತು