ಇತ್ತೀಚಿನ ಸುದ್ದಿ
ಬಾಳೆಪುಣಿ: ಮೊಬೈಲಿನಲ್ಲಿ ಮಾತನಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮನೆ ಬಿಟ್ಟ ಬಾಲಕಿ
08/06/2021, 21:09
ಕೊಣಾಜೆ(reporterkarnataka news): ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿರುವುದನ್ನು ತಾಯಿ ಪ್ರಶ್ನಿಸಿದಕ್ಕೆ ಬಾಲಕಿಯೊಬ್ಬಳು ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆಪುಣಿಯಲ್ಲಿ ನಡೆದಿದೆ.
ತಾಯಿ ಮೀನಾಕ್ಷಿ ಕೊಣಾಜೆ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಜೂ.6 ರಂದು ಮೀನಾಕ್ಷಿ ಅವರು ಮುಡಿಪು ಪೇಟೆಗೆ ಮಗನ ಜೊತೆಗೆ ಬೆಳಗ್ಗೆ 7.30 ರ ಸುಮಾರಿಗೆ ತೆರಳಿದ್ದರು. ಈ ವೇಳೆ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ಸೈಟ್ ಮನೆಯಲ್ಲಿದ್ದ ದೀಕ್ಷಾ (18) ನಾಪತ್ತೆಯಾಗಿದ್ದಾಳೆ. ದೀಕ್ಷಾ ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿದ್ದುದನ್ನು ತಾಯಿ ಪ್ರಶ್ನಿಸಿದ್ದರು. ಇದೇ ಕಾರಣವನ್ನು ಮುಂದಿಟ್ಟುಕೊಂಡು ಬಾಲಕಿ ನಾಪತ್ತೆಯಾಗಿರುವ ಸಾಧ್ಯತೆ ಇದೆ ಎಂದು ದೂರು ದಾಖಲಿಸಿದ್ದಾರೆ.