9:26 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿಗೊಂದು ಗ್ರಾಮ ಒನ್ : ರಾಜ್ಯ ಸಚಿವ ಸಂಪುಟ ಒಪ್ಪಿಗೆ

13/03/2022, 10:55

ಬೆಂಗಳೂರು(reporterkarnataka.com): ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗ್ರಾಮ ಒನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ಗ್ರಾಮ ಒನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವ ಕುರಿತು ಚರ್ಚೆ ನಡೆದಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಅನುಷ್ಠಾನಗವಾಗುತ್ತಿರುವ ಯೋಜನೆಯನ್ನು ಎಲ್ಲ ಗ್ರಾಮಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು, ತಮ್ಮ ಬಜೆಟ್ ಭಾಷಣದಲ್ಲಿ, ರಾಜ್ಯ ಸರ್ಕಾರವು ಗ್ರಾಮೀಣ ಜನರಿಗೆ ಪಂಚಾಯಿತಿ ಹಂತದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸುವ ಗ್ರಾಮ ಒನ್ ಯೋಜನೆಯನ್ನು ಜಾರಿಗೊಳಿಸಿದ್ದು, ಇದರಿಂದ ಜನರ ಅಲೆದಾಟ ತಪ್ಪಲಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು