10:14 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು: ಬಿಎಸ್ಸೆನ್ನೆಲ್ ಹೆಸರಿನಲ್ಲಿ ಕೆವೈಸಿ ಕೇಳುವ ನೆಪ; ಆನ್ ಲೈನ್ ಖದೀಮರು ನಿಮ್ಮನ್ನು ವಂಚಿಸಿಯಾರು ಜೋಕೆ

13/03/2022, 22:52

ಮಂಗಳೂರು (reporterkarnataka.com): ತಾನು ಬಿಎಸ್ಸೆನ್ನೆಲ್ ಕಂಪನಿಯಿಂದ ಕರೆ ಮಾಡುತ್ತಿದ್ದೇನೆ ಅಂತ ಹೇಳಿ ಕೆವೈಸಿ ಸಂಬಂಧಿಸಿದ ದಾಖಲೆ ಕೇಳಿ ನಾಗರಿಕರೊಬ್ಬರನ್ನು ವಂಚಿಸಲು ಯತ್ನಿಸಿದ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಂದಾದಾರರು ಕೆವೈಸಿಗೆ ಅಗತ್ಯ ದಾಖಲೆಗಳನ್ನು ನೀಡದಿದ್ದರೆ, ಸಿಮ್ ಕಾರ್ಡ್ ಅನ್ನು ನಿರ್ಬಂಧಿಸಲಾಗುವುದು ಎಂದು ಕರೆ ಮಾಡಿದಾತ
ಬೆದರಿಸಿದ್ದಾನೆ. ಆತ ಕನ್ನಡದಲ್ಲೇ ಮಾತನಾಡಿದ್ದಾನೆ. ಆದರೆಎಚ್ಚೆತ್ತ ನಾಗರಿಕ ಆತನನ್ನು ಹೆಚ್ಚು ಪ್ರಶ್ನಿಸಲು ಆರಂಭಿಸಿದಾಗ ವಂಚಕ ಅವರನ್ನು ನಿಂದಿಸಿ ಕರೆ ಕಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಆನ್‌ಲೈನ್ ವಂಚಕರು ಕೆವೈಸಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಒಟಿಪಿ ಮತ್ತು ಇತರ ದಾಖಲೆಗಳಂತಹ ವಿವರಗಳನ್ನು ನಾಗರಿಕರಿಗೆ ಕೇಳುವ ಈ ರೀತಿಯ ಅನೇಕ ನಿದರ್ಶನಗಳು ಹಿಂದೆಯೂ ಬೆಳಕಿಗೆ ಬಂದಿವೆ.

ಆದರೆ, ಅವರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡುತ್ತಿದ್ದರು. ಆದರೆ ಈಗ ಕೆಲವರು ಕನ್ನಡದಲ್ಲೇ ಮಾತನಾಡುತ್ತಿದ್ದಾರೆ. ವಂಚಕರು ಕನ್ನಡ ಭಾಷೆಯಲ್ಲೇ ಮಾತನಾಡುವ ನೆಪದಲ್ಲಿ ಸಾರ್ವಜನಿಕರನ್ನು ನಂಬಿಸಿ ವಂಚನೆ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು