9:26 AM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಭಾರತ ಮಾನವೀಯ ಮೌಲ್ಯ, ಶಾಂತಿ- ಅಹಿಂಸೆಯ ಮಹತ್ವ ಇಡೀ ಜಗತ್ತಿಗೆ ಸಾರಿದೆ: ಮೂಡುಬಿದರೆಯಲ್ಲಿ ರಾಜ್ಯಪಾಲ ಗೆಹ್ಲೋಟ್

14/03/2022, 20:37

ಮೂಡುಬಿದರೆ(reporterkarnataka.com): ವಿಶ್ವಕ್ಕೆ ಶಾಂತಿ ಹಾಗೂ ಅಹಿಂಸೆಯ ಸಂದೇಶ ಸಾರಿದ ಭಾರತದ ಕೀರ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾವೆಲ್ಲರೂ ಕೈಜೋಡಿಸಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.


ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪಟ್ಟಣದ 18 ಜೈನ ದೇವಾಲಯಗಳಲ್ಲಿ ಪ್ರಮುಖವಾದ ಸಾವಿರ ಕಂಬಗಳ ಬಸದಿಯಾದ ತ್ರಿಭುವನ ತಿಲಕ ಚೂಡಾಮಣಿ ದೇವಾಲಯಕ್ಕೆ ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ನಮ್ಮ ದೇಶ ಮಾನವೀಯ ಮೌಲ್ಯಗಳು, ಶಾಂತಿ, ಅಹಿಂಸೆಯ ಮಹತ್ವ ಮತ್ತು ಸಹೋದರತ್ವವನ್ನು ಇಡೀ ಜಗತ್ತಿಗೆ ತೋರಿಸಿದೆ. ಭಾರತದ ಸಂಸ್ಕೃತಿ ವಿಶ್ವಕ್ಕೆ ಪ್ರೇರಣೆ ನೀಡಿದೆ. ಭಾರತ ಜಗತ್ತಿಗೆ ಶಾಂತಿ, ಅಹಿಂಸೆ ಮತ್ತು ಸೇವೆಗೆ ಸ್ಫೂರ್ತಿಯನ್ನು ನಿರಂತರವಾಗಿ ನೀಡಲಿದೆ ಎಂಬ ಭರವಸೆ ಇದೆ  ಎಂದರು.

ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ರಾಜ್ಯಪಾಲರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮೂಡಬಿದರೆ ಪುರಸಭೆ ಅಧ್ಯಕ್ಷ ಪ್ರಸಾದ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಠದ ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು