7:38 PM Friday14 - November 2025
ಬ್ರೇಕಿಂಗ್ ನ್ಯೂಸ್
ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ…

ಇತ್ತೀಚಿನ ಸುದ್ದಿ

ಕಂಪ್ಲಿಯ ಕೊಟ್ಟಾಲ್ ರಸ್ತೆಗೆ ಪುರಸಭೆಯಿಂದ  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರು ನಾಮಕರಣ

14/03/2022, 21:06

ಕಂಪ್ಲಿ(reporterkarnataka.com): ಕಂಪ್ಲಿ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಕಂಪ್ಲಿಯ ಪ್ರಮುಖ ರಸ್ತೆ ಸರ್ಕಾರಿ ಸಮುದಾಯ ಆಸ್ಪತ್ರೆಯಿಂದ ಕೊಟ್ಟಾಲ್ ಗೆ ಹೋಗುವ ರಸ್ತೆಗೆ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರಸ್ತೆಯೆಂದು ನಾಮಕರಣ ಮಾಡಲು ನಿರ್ಣಯಿಸಲಾಯಿತು.

 ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರು ಸಹಮತ ನೀಡಿ ನಿರ್ಣಯ ಹೊರಡಿಸಿದ ಕ್ರಮಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಡಾ. ಮೋಹನ್ ಕುಮಾರ್ ದಾನಪ್ಪನವರು ಅಭಿನಂದಿಸಿದ್ದಾರೆ

ರಾಜ್ಯ ಮತ್ತು ದೇಶದ ಪ್ರಖ್ಯಾತ ನಟ ಕಲೆ, ಶಿಕ್ಷಣ ಮತ್ತು ಸಮಾಜ ಸೇವೆಯ ಮೂಲಕ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿ ಇತ್ತೀಚೆಗೆ ಹೃದಯಘಾತದಿಂದ ಆಗಲಿದ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ ಸ್ಮರರ್ಣಾಥವಾಗಿ ಕಂಪ್ಲಿಯ ಸರ್ಕಾರಿ ಸಮುದಾಯ ಆಸ್ಪತ್ರೆಯಿಂದ ಕೊಟ್ಟಾಲ್‌ಗೆ ಹೋಗುವ ಪ್ರಮುಖ ರಸ್ತೆಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡುವಂತೆ ದಿನಾಂಕ: 4-11-2021 ರಂದು ಒತ್ತಾಯಿಸಿ ಪುರಸಭೆ ಕಛೇರಿಗೆ ಮನವಿ ಪತ್ರ ಸಲ್ಲಿಸಿದ್ದರು. ಮನವಿ ಪತ್ರಕ್ಕೆ ಸ್ಪಂದಿಸಿ ದಿ: 9-3-2022 ರಂದು ನಡೆದ ಕಂಪ್ಲಿ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿ ಸರ್ವಸದಸ್ಯರ ಸಹ ಮತ ಪಡೆದು ಕೊಟ್ಟಾಲ್ ರಸ್ತೆಗೆ ಪುನೀತ್ ರ ಹೆಸರನ್ನು ನಾಮಕರಣವನ್ನ ಮಾಡಲು ಅಧಿಕೃತವಾಗಿ ನಿರ್ಣಯ ಹೊರಡಿಸಿರುವುದು ವೈಯಕ್ತಿಕವಾಗಿ ಮತ್ತು ಕಂಪ್ಲಿ ನಗರದ ಪುನೀತ್ ರಾಜ್ ಕುಮಾರ್ ರವರ ಅಪಾರ ಅಭಿಮಾನಿ ಬಳಗಕ್ಕೆ ಸಂತಸ ನೀಡಿದ್ದು ಪುರಸಭೆಯ ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳ ಕಾರ್ಯವನ್ನ ಮೆಚ್ಚಿ ಸಿಜಿಸಿ ಡಾ. ಮೋಹನ್ ಕುಮಾರ್ ದಾನಪ್ಪನವರು ಪತ್ರದ ಮೂಲಕ ಅಭಿನಂದನೆ ಸಲ್ಲಿಸಿ, 

ಇದೇ ತಿಂಗಳು ಮಾರ್ಚ್ 17 ರಂದು ಪುನೀತ್ ರಾಜ್ ಕುಮಾರ್ ರವರ ಜನ್ಮದಿನದಂದು ರಸ್ತೆಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ರವರ ನಾಮವಿರುವ ಫಲಕವನ್ನ ಹಾಕುವ ಅಥವಾ ಈ ರಸ್ತೆಯ ಕೆಲವು ಮಳಿಗೆಗಳಿಗೆ ಪುನೀತ್ ರ ಹೆಸರನ್ನು ಬರೆಸುವ ಮುಖಾಂತರವಾಗಲಿ ಅಥವಾ ಈ ರಸ್ತೆಯ ಪ್ರಮುಖ ಗೋಡೆಗೆ ಹೆಸರನ್ನು ಬರೆಸುವ ಮುಖಾಂತರ ಅಧಿಕೃತವಾಗಿ ಚಾಲನೆಗೊಳಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು