6:56 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮುಂದಿನ ದಸರಾ ವೇಳೆ ಅರಮನೆ ಆವರಣದಲ್ಲಿ ಯಕ್ಷಗಾನ ಪ್ರದರ್ಶನ: ಮೈಸೂರು ರಾಜ ವಂಶಸ್ಥ ಯದುವೀರ್‌

15/03/2022, 09:51

ಸಂಪಾಜೆ(reporterkarnataka.com):
ಮೈಸೂರಿನ ಅರಮನೆಗೂ ದಕ್ಷಿಣ ಕನ್ನಡದ ಯಕ್ಷಗಾನ ಕಲೆಗೂ ಅವಿನಾಭಾವ ಸಂಬಂಧವಿದೆ.

ಮುಂದಿನ ದಸರಾ ಸಂದರ್ಭದಲ್ಲಿ ಸರಕಾರದ ಜೊತೆಗೆ ಮಾತುಕತೆ ನಡೆಸಿ ಅರಮನೆ ಅವರಣದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಮೈಸೂರು ರಾಜ ವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಸಂಪಾಜೆ ಸಮೀಪದ ಕಲ್ಲುಗುಂಡಿ ಶಾಲಾ ಆವರಣದಲ್ಲಿ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನದ ವತಿಯಿಂದ ನಡೆದ 31ನೇ ವರ್ಷದ ಯಕ್ಷೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮೈಸೂರಿನ ಅರಮನೆಗೂ ಯಕ್ಷಗಾನ ಕಲೆಗೂ ಅವಿನಾಭಾವ ಸಂಬಂಧವಿದೆ. ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರು ಅರಮನೆಗೆ ಯಕ್ಷಗಾನ ಕಲಾವಿದರನ್ನು ಕರೆಸಿದ್ದರು. ಮುಂದಿನ ದಸರಾ ಸಂದರ್ಭದಲ್ಲಿ ಸರಕಾರದ ಜೊತೆಗೆ ಮಾತುಕತೆ ನಡೆಸಿ ಅರಮನೆ ಅವರಣದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದರು.

ಯಕ್ಷಗಾನ ಕಲೆಗೆ ಶ್ಯಾಮ್ ಭಟ್ ಅವರು ಅಪಾರ ಕೊಡುಗೆ ನೀಡಿದ್ದಾರೆ. ಈ ಹಿಂದೆ ಈಶ್ವರ ಮಂಗಲದ ಪಂಚಮುಖಿ ಆಂಜನೇಯ ಕ್ಷೇತ್ರಕ್ಕೆ ಭೇಟಿ ನೀಡಿದಾಗ ಸಂಪಾಜೆಯ ಈ ಪ್ರದೇಶಕ್ಕೂ ಭೇಟಿ ನೀಡಿದ್ದೆ ಎಂದು ಯದುವೀರ್ ಸ್ಮರಿಸಿದರು.

ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಮಹಾ ಸ್ವಾಮಿಗಳು ಯಕ್ಷೋತ್ಸವ ಉದ್ಘಾಟಿಸಿ ಆಶೀರ್ವಚನ ನೀಡಿ, ಶುಭ ಹಾರೈಸಿದರು. ಇದೇ ವೇಳೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು