1:09 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಬೆಂಗಳೂರು ನಗರದಾದ್ಯಂತ ಇಂದು 144 ಸೆಕ್ಷನ್ ನಿಷೇಧಾಜ್ಞೆ ಜಾರಿ 

15/03/2022, 10:05

ಬೆಂಗಳೂರು(reporterkarnataka.com): ಕರ್ನಾಟಕ ಹೈಕೋರ್ಟ್ ನಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಹಿಜಾಬ್ ವಿವಾದದ ಅರ್ಜಿಯ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲು, ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ರಾಜ್ಯಾಧ್ಯಂತ ಶಾಲಾ-ಕಾಲೇಜುಗಳ ಬಳಿಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲು ಸೂಚನೆ ನೀಡಲಾಗುತ್ತದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಇಂದು ಎಲ್ಲಾ ಡಿಸಿಪಿಗಳ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ರಾತ್ರಿ 10.30ಕ್ಕೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ನಗರದಲ್ಲಿನ ಶಾಲಾ-ಕಾಲೇಜುಗಳ ಬಳಿಯಲ್ಲಿ ಭದ್ರತೆಯನ್ನು ಹೆಚ್ಚಿಸುವ ಕುರಿತಂತೆ ಚರ್ಚೆ ನಡೆಸಲಾಗುತ್ತಿದೆ. ಅಲ್ಲದೇ ಬೆಂಗಳೂರು ನಗರಾದ್ಯಂತ ನಾಳೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇನ್ನೂ ರಾತ್ರಿ 8.30ಕ್ಕೆ ಆಯಾ ಜಿಲ್ಲೆಗಳಲ್ಲಿಯೂ ಡಿಸಿ, ಎಸ್ಪಿಗಳು ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯಲ್ಲಿ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸೂಚನೆ ನೀಡಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು