1:50 AM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ನೆಲಬೊಮ್ಮನಹಳ್ಳಿ: ಎಐಟಿಯುಸಿ ಗ್ರಾಮ ಘಟಕ ಉದ್ಘಾಟನೆ

16/03/2022, 10:12

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನೆಲಬೊಮ್ಮನಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕಾರ್ಮಿಕರ ಸಂಘ ಎಐಟಿಯುಸಿ ಗ್ರಾಮ ಘಟಕವನ್ನು ಕೂಡ್ಲಿಗಿ ತಾಲೂಕು ಅಧ್ಯಕ್ಷ ಯು.ಪೆನ್ನಪ್ಪ,  ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೋಗಳಿ ಮಂಜುನಾಥ್ ನಾಮಫಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ  ಮಂಜುನಾಥ ಮಾತನಾಡಿ, ಕಾರ್ಮಿಕರಿಗೆ ಸರ್ಕಾರ ನೂರಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಸೌಲಭ್ಯಗಳನ್ನು ಪಡೆದುಕೊಳ್ಳುವಲ್ಲಿ ಕಾರ್ಮಿಕರು ಸಂಘಟಿತರಾಗಿ ಮುಂದಾಗಬೇಕೆಂದರು. 

ಕಾರ್ಮಿಕ ಮುಖಂಡ  ಎಚ್. ವೀರಣ್ಣ ಮಾತನಾಡಿ ಸಾವಿರಾರು ಕೋಟಿ ಹಣ ಮಂಡಳಿಯಲ್ಲಿದ್ದು, ಸರ್ಕಾರ ಮತ್ತು ಅಧಿಕಾರಿಗಳು ಕಾರ್ಮಿಕರಿಗೆ ಬಸ್ ಪಾಸ್ ನೀಡುವ ನೆಪದಲ್ಲಿ ಮಂಡಳಿಯ ಹಣವನ್ನು ಲೂಟಿ ಮಾಡಲು ವಂಚು ಹಾಕಲಾಗಿದೆ. ಇಂತಹ ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯವಾಗಿದ್ದು, ಆದ್ದರಿಂದ ಮಂಡಳಿಯ ಯೋಜನೆಗಳು ಪಡೆಯಲು ಕಾರ್ಮಿಕರು ಅಲ್ಲದವರು ಸಾವಿರಾರು ಜನ ಮಂಡಳಿಯಲ್ಲಿ ನೊಂದಣೆ ಗೊಂಡಿದ್ದಾರೆ. ಅಧಿಕಾರಿಗಳು ಅದನ್ನು ತಡೆಯಲು ಕ್ರಮ ಜರುಗಿಸದೆ, ಅಕ್ರಮ ಕಾರ್ಡ್ ಮಾಡಿಸುವವರಿಗೆ ಅಧಿಕಾರಿಗಳು ಕೈಜೋಡಿಸುತ್ತಿದ್ದಾರೆಂದು ಆರೋಪಿಸಿದರು.

ಇದರಿಂದಾಗಿ ನಿಜವಾದ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಇದರ ವಿರುದ್ಧ ರಾಜ್ಯವ್ಯಾಪಿ ಪ್ರಬಲವಾದ ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಗ್ರಾಮ ಗ್ರಾಮಗಳಲ್ಲಿ ಸಂಘಟನೆ ಮಾಡುವುದರ ಮೂಲಕ, ಕಾರ್ಮಿಕರಿಗೆ ತಿಳುವಳಿಕೆ ಮೂಡಿಸಲಾಗುವುದು. ಯೋಜನೆಗಳ ಉಪಯೋಗ ಹಾಗೂ ಜಾಗೃತಿ ಮೂಡಿಸುವುದು ಭ್ರಷ್ಟ ಅಧಿಕಾರಿಗಳ ಭ್ರಷ್ಟ ಜನಪ್ರತಿನಿಧಿಗಳ  ವಿರುದ್ಧ  ಹೋರಾಟ ಮಾಡಲೇಬೇಕಾಗಿದೆ.ಇಲ್ಲವಾದಲ್ಲಿ ಕಟ್ಟಡ ಕಾರ್ಮಿಕರ ಹಕ್ಕುಗಳನ್ನು ಬೇರೆಯವರು ಪಡೆದುಕೊಳ್ಳುತ್ತಿದ್ದು ಹಾಗೂ ಮಂಡಳಿಯಲ್ಲಿ ಸಾವಿರಾರು ಕೋಟಿ ಹಣವಿದ್ದರೂ ಬೆಲೆಯೇರಿಕೆಯ ಪರಿಸ್ಥಿತಿಯಲ್ಲಿ ಕಾರ್ಮಿಕರ ಕುಟುಂಬಗಳಿಗೆ ಉಪಯೋಗವಾಗುವ ಯೋಜನೆಗಳ ಸೌಲಭ್ಯಗಳನ್ನು ಅದಕ್ಕನುಗುಣವಾದ ಸಹಾಯಧನಗಳನ್ನು ಹೆಚ್ಚು ಮಾಡದೆ ಅಧಿಕಾರಿಗಳಿಗೆ ಸಚಿವರಿಗೆ ಮಂಡಳಿಯ ಹಣ ಲೂಟಿ ಮಾಡಲು ಅನುಕೂಲವಾಗುವ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಇದನ್ನು ಸಂಘಟನೆ ಖಂಡಿಸುತ್ತದೆ.  ಮದುವೆ ಸಹಾಯಧನ 200000 ಹೆಚ್ಚಳ ಮಾಡಬೇಕು ಅಪಘಾತ ಸಹಾಯಧನ 1000000 ಮಾಡಬೇಕು. ಶವ ಸಂಸ್ಕಾರದ ಪರಿಹಾರ ಹಣ 100000 ಮಾಡಬೇಕು ಮನೆ ನಿರ್ಮಾಣಗಳನ್ನು ಮಂಡಳಿಯಿಂದ ಕಟ್ಟಡ ಕಾರ್ಮಿಕರಿಗೆ ನಿರ್ಮಿಸಿಕೊಡಲು ಯೋಜನೆಯನ್ನು ಜಾರಿಗೊಳಿಸಬೇಕು ನಿವೃತ್ತಿ ಮಾಶಾಸನ ತಿಂಗಳ 5000 ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಅಧ್ಯಕ್ಷರಾಗಿ ವಿ.ಮಾರೇಶ್, ಕಾರ್ಯದರ್ಶಿಯಾಗಿ ಮಂಜುನಾಥ್ ಕಾಲೇಜ್ ಮುಂತಾದವರನ್ನು ಆಯ್ಕೆ ಮಾಡಲಾಯಿತು.ಗ್ರಾಮ ಪಂಚಾಯತಿ ಅಧ್ಯಕ್ಷರಾದ ಲಕ್ಷ್ಮಿ ದ್ಯಾಮಣ್ಣ, ಓಬಳೇಶ್, ವೆಂಕಟೇಶ್, ಲೋಕೇಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು