2:38 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಕರಾವಳಿ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ ಮೆಂಟ್ ವಿದ್ಯಾರ್ಥಿ ಆತ್ಮಹತ್ಯೆ: ಫೀಸಿಗಾಗಿ ಪೀಡಿಸಲಾಗಿತ್ತೇ ಅಮಾಯಕನ?

17/03/2022, 11:42

ಮಂಗಳೂರು(reporterkarnataka.com): ಮಂಗಳೂರಿನ ಕರಾವಳಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾಲೇಜಿನ ಪ್ರಾಧ್ಯಾಪಕರು ಹಾಗೂ ಅಧ್ಯಕ್ಷರು ನೀಡುತ್ತಿದ್ದ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಕುಮಾರಸ್ವಾಮಿ ಬಡಾವಣೆಯ ನಿವಾಸಿ ಭರತ್ (20) ಎಂಬಾತ ಮಂಗಳೂರಿನ ಕರಾವಳಿ ಕಾಲೇಜ್ ಆಫ್  ಹೊಟೇಲ್ ಮ್ಯಾನೇಜ್‌ಮೆಂಟ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.

ಪಿಜಿಯಲ್ಲಿ ವಾಸ್ತವ್ಯ ಹೊಂದಿದ್ದ ಭರತ್ ಪಿಜಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಭರತ್ ಆತ್ಮಹತ್ಯೆಗೆ ಮುನ್ನ ತಾಯಿಗೆ ಕರೆ ಮಾಡಿದ್ದಾನೆ. ದುರದೃಷ್ಟವಶಾತ್ ಆ ವೇಳೆ ಕರೆ ಸ್ವೀಕರಿಸಲು ತಾಯಿಗೆ ಸಾಧ್ಯವಾಗಿರಲಿಲ್ಲ ಎಂದು ತಿಳಿದುಬಂದಿದೆ. ಈ ನಡುವೆ ಭರತ್, ಕಾಲೇಜಿನ ಪ್ರಾಧ್ಯಾಪಕರೊಬ್ಬರು ತಾನು ಮಾಡಿದ ಪ್ರಾಜೆಕ್ಟ್ ವರ್ಕ್ ಸರಿ ಇಲ್ಲ ಎಂದು ಸಹಿ ಮಾಡಿಲ್ಲ. ಪರೀಕ್ಷೆಗೆ ಕುಳಿತುಕೊಳ್ಳಲು ಕೂಡ ನಿರಾಕರಿಸಿದ್ದಾರೆ ಎಂದು ಡೆತ್ ನೋಟು ‌ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಲೇಜಿನ ಅಧ್ಯಕ್ಷರ ಹೆಸರನ್ನು ಕೂಡ ಉಲ್ಲೇಖಿಸಿದ್ದಾನೆ ಎನ್ನಲಾಗಿದೆ.

ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು