1:12 PM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ಮೂರೂರು ಪ್ರಗತಿ ವಿದ್ಯಾಲಯದಲ್ಲಿ ದತ್ತಿನಿಧಿ, ಸಾಧನಾ ಪುರಸ್ಕಾರ

20/03/2022, 10:04

ಕಾರವಾರ(reporterkarnataka.com):

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಮೂರೂರು ಪ್ರಗತಿ ವಿದ್ಯಾಲಯದಲ್ಲಿ ದತ್ತಿನಿಧಿ ಹಾಗೂ ಸಾಧನಾ ಪುರಸ್ಕಾರ ಕಾರ್ಯಕ್ರಮ ನೆರವೇರಿತು. 

ಮೂರೂರು ಪ್ರಗತಿ ವಿದ್ಯಾಲಯದ ನಿವೃತ್ತ ಮುಖ್ಯಾಧ್ಯಾಪಕ ವಿ. ಆರ್. ಭಟ್ಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪುಟ್ಟದಾಗಿ ಪ್ರಾರಂಭವಾದ ಸಂಸ್ಥೆ ಎತ್ತರಕ್ಕೆ ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸಂಸ್ಥೆಯ ವತಿಯಿಂದ ಇನ್ನು ಹೆಚ್ಚೆಚ್ಚು ಸಾಧಕರಿಗೆ ಪುರಸ್ಕರಿಸಿ ಗೌರವಿಸುವಂತೆ ಆಗಲಿ ಎಂದು ಶುಭ ಹಾರೈಸಿದರು. 

ಮೂರೂರು ಕಲ್ಲಬ್ಬೆ ಯ ವಿದ್ಯಾನಿಕೇತನ ಸಂಸ್ಥೆಯ ಕಾರ್ಯಾಧ್ಯಕ್ಷ ಆರ್. ಜಿ. ಭಟ್ಟ  ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ನಿಸರ್ಗದ ಮಡಿಲಲ್ಲಿ ಸಂಸ್ಕೃತಿಗೆ ಹೆಸರಾದ ಶಾಲೆಯಲ್ಲಿ ತಾವು ಸಹ ಕಲಿತಿರುವ ಘಳಿಗೆಗಳನ್ನು ನೆನೆಸಿಕೊಂಡು ಪ್ರತಿಭೆಗಳಿಗೆ ಪ್ರೋತ್ಸಾಹಿಸುವುದು ತಮ್ಮ ಆದ್ಯ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮದ ಅತಿಥಿಗಳಾಗಿ  ಸಂಸ್ಥೆಯ ಉಪಾಧ್ಯಕ್ಷ  ವಿ. ಎಸ್. ಹೆಗಡೆ, ಕಾರ್ಯದರ್ಶಿ

 ಟಿ. ಎಸ್. ಭಟ್ಟ, ವಿದ್ಯಾರ್ಥಿನಿಲಯದ ಸಂಚಾಲಕ

 ಐ. ಪಿ. ಭಟ್ಟ ಉಪಸ್ಥಿತರಿದ್ದು ಮಾತನಾಡಿ ಇನ್ನಷ್ಟು ಹೆಚ್ಚೆಚ್ಚು ಪ್ರೋತ್ಸಾಹಕರು ದತ್ತಿನಿಧಿ ಹಾಗೂ ಸಾಧನಾ ಪುರಸ್ಕಾರಕ್ಕೆ ಸಿಗುವಂತಾಗಲಿ, ಸಾಧಕರಿಗೆ ಮಾರ್ಗದರ್ಶಕರಾಗಲಿ ಎಂದು ಶುಭಕೋರಿದರು. ಶಿಕ್ಷಣ ಸಮಿತಿಯ ಸಂಚಾಲಕ

 ಟಿ. ಆರ್. ಜೋಷಿ ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದ ರೂಪದಲ್ಲಿ ಪ್ರೋತ್ಸಾಹಿಸಿ ತುಂಬುವ ಕಾರ್ಯ ಇದಾಗಿದೆ ಎಂದರು. ಪ್ರಗತಿ ವಿದ್ಯಾಲಯ ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಎಲ್ಲಾ ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು. 

ಪ್ರಗತಿ ವಿದ್ಯಾಲಯ ಆಂಗ್ಲಮಾಧ್ಯಮ ಪ್ರೌಢ ವಿಭಾಗದ ಮುಖ್ಯಾಧ್ಯಾಪಕ ವಿವೇಕ ಆಚಾರಿ, ಪ್ರಗತಿ ವಿದ್ಯಾಲಯ ಕನ್ನಡ ಮಾಧ್ಯಮ ವಿಭಾಗದ ಮುಖ್ಯಾಧ್ಯಾಪಕರ ವಿ. ಎಸ್. ಗೌಡ ಉಪಸ್ಥಿತರಿದ್ದರು. ಸಂಸ್ಥೆಯ ಸರ್ವ ಸದಸ್ಯರು, ಶಾಲಾ ಶಿಕ್ಷಕ ವೃಂದ, ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು. ಶ್ರೀಧರ ಸಂಸ್ಕೃತ ಪಾಠಶಾಲೆಯ ಮುಖ್ಯಾಧ್ಯಾಪಕ ಶ್ರೀಪಾದ್ ಭಟ್ಟ ಸ್ವಾಗತಿಸಿದರು. ಪ್ರಗತಿ ವಿದ್ಯಾಲಯ ಪ್ರಾಥಮಿಕ ವಿಭಾಗದ ಮುಖ್ಯಾಧ್ಯಾಪಕಿ ನಾಗವೇಣಿ ಭಟ್ಟ

ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು