2:37 PM Wednesday27 - November 2024
ಬ್ರೇಕಿಂಗ್ ನ್ಯೂಸ್
ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಸುಸ್ಥಿರ ಕರಾವಳಿ ನಿರ್ವಹಣಾ ರಾಷ್ಟ್ರೀಯ ಕೇಂದ್ರ: ಸಚಿವ ಆನಂದ್ ಸಿಂಗ್ ಚಿಂತನೆ

20/03/2022, 15:30

ಮಂಗಳೂರು(reporterkarnataka.com): ರಾಜ್ಯದ 320 ಕಿ.ಮೀ. ವ್ಯಾಪ್ತಿಯ ಕರಾವಳಿ ವಲಯದ ವಿವಿಧ ನಿರ್ವಹಣಾ ಯೋಜನೆಗಳಿಗೆ ಅನುಮತಿ ನೀಡುವ ಸುಸ್ಥಿರ ಕರಾವಳಿ ನಿರ್ವಹಣಾ ರಾಷ್ಟ್ರೀಯ ಕೇಂದ್ರ (ಎನ್.ಸಿ.ಎಸ್.ಸಿ.ಎಂ.- ನ್ಯಾಷನಲ್ ಸೆಂಟರ್ ಫಾರ್ ಸಸ್ಟೈನಬಲ್ ಕೋಸ್ಟಲ್ ಮ್ಯಾನೇಜ್‍ಮೆಂಟ್) ವನ್ನು ಸುರತ್ಕಲ್‍ನ ಎನ್‍ಐಟಿಕೆ ಸಹಯೋಗದಲ್ಲಿ ಮಂಗಳೂರಿನಲ್ಲಿ ಆರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್  ಹೇಳಿದರು.


ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸ್ತುತ ಚೆನ್ನೈನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಸ್ಥಿರ ಕರಾವಳಿ ನಿರ್ವಹಣ ರಾಷ್ಟ್ರೀಯ ಕೇಂದ್ರವು ರಾಜ್ಯದ ಎಸ್.ಸಿ.ಝಡ್. ವಲಯದಲ್ಲಿ ಕೈಗೊಳ್ಳುವ ನೂತನ ಯೋಜನೆಗಳಿಗೆ ಪ್ರಸ್ತಾವನೆ ಸಲ್ಲಿಸಿ, ಅನುಮತಿ ಪಡೆಯಬೇಕಿರುತ್ತದೆ, ಆ ಕೇಂದ್ರವನ್ನು ಸುರತ್ಕಲ್‍ನ ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಸಹಯೋಗದಲ್ಲಿ ಮುಂದಿನ ದಿನಗಳಲ್ಲಿ ಆರಂಭಿಸಲು ಚಿಂತನೆ ನಡೆಸಲಾಗಿದೆ, ಅದಕ್ಕಾಗಿ ಅಧಿಕಾರಿಗಳೊಂದಿಗೆ ಚೆನ್ನೈನಲ್ಲಿರುವ ಕೇಂದ್ರಕ್ಕೆ ಭೇಟಿ ನೀಡಲಾಗುವುದು, ಮುಂದಿನ ಎರಡು ತಿಂಗಳಲ್ಲಿ ಆ ಕೇಂದ್ರದ ಆರಂಭಕ್ಕೆ ಯತ್ನಿಸಲಾಗುವುದು, ಇದರಿಂದಾಗಿ ರಾಜ್ಯದ ಕರಾವಳಿ ವಲಯದಲ್ಲಿ ಕೈಗೊಳ್ಳಬಹುದಾದ ವಿವಿಧ ರೀತಿಯ ಅಭಿವೃದ್ದಿ ಚಟುವಟಿಕೆಗಳಿಗೆ ಅನುಮತಿ ಪಡೆಯುವುದು ಸುಲಭಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಸಸಿಹಿತ್ಲು ಕಡಲತೀರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತುತ ಎನ್.ಸಿ.ಎಸ್.ಸಿ.ಎಂ ನಿಂದ ಅನುಮತಿ ದೊರೆಯಬೇಕಿದೆ, ಅನುಮತಿ ದೊರೆತಲ್ಲಿ ಅಲ್ಲಿ ಸಫಿರ್ಂಗ್, ಕ್ಲಬ್ ಹೌಸ್, ಶೌಚಾಲಯ, ಪಾಕಿರ್ಂಗ್ ಸೇರಿದಂತೆ ಇತರೆ ಅಭಿವೃದ್ದಿ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು ಅದಕ್ಕೆ ರಾಜ್ಯ ಸರ್ಕಾರ 10 ಕೋಟಿ ರೂ.ಗಳ ಅನುದಾನ ನೀಡಿದೆ ಎಂದು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನಘಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಅದರ ಉದ್ಘಾಟನೆಗೆ ಸಿದ್ದತೆ ಮಾಡಿಕೊಳ್ಳುವಂತೆ ತಿಳಿಸಿದ ಸಚಿವರು, ಮಂಗಳೂರು ನಗರದ ಸುಲ್ತಾನ್ ಬತ್ತೇರಿ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳೂರು ತಾಲೂಕಿನ ಕುಡುಪು ಅನಂತ ಪದ್ಮನಾಭ ದೇವಸ್ಥಾನದ ಬಳಿ ಶೌಚಾಲಯ ಹಾಗೂ ಇಂಟರ್‍ಲಾಕ್ ಕಾಮಗಾರಿ ಮುಕ್ತಾಯ ಹಂತದಲ್ಲಿದೆ, ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಸೋಮನಾಥೇಶ್ವರ ದೇವಸ್ಥಾನದ ಮೂಲಭೂತ ಕಾಮಗಾರಿ ಮುಂಬರುವ ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸಿ ಮಾಹಿತಿ ನೀಡುವಂತೆ ಸಚಿವರು ನಿರ್ಮಿತಿ ಕೇಂದ್ರದ ಅಧಿಕಾರಿಗೆ ನಿರ್ದೇಶನ ನೀಡಿದರು.

ಬಂಟ್ವಾಳ ತಾಲೂಕಿನ ಬೆಳ್ಳೂರು ಕಾವೇಶ್ವರ ದೇವಸ್ಥಾನದ ಬಳಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ದಿ ಕಾಮಗಾರಿಯನ್ನು ಮುಂಬರುವ ಎರಡು ತಿಂಗಳೊಳಗೆ ಪೂರ್ಣಗೊಳಿಸಬೇಕು, ಅದೇ ರೀತಿ ನಿಗದಿತ ಕಾಲಾವಧಿಯಲ್ಲಿ ಮಂಗಳೂರು ತಾಲೂಕಿನ ಕುರ್ನಾಡು ಸೋಮನಾಥ ದೇವಸ್ಥಾನಕ್ಕೆ ಮೂಲಭೂತ ಸೌಕರ್ಯ ಒದಗಿಸುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದ ಸಚಿವರು, ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಸೂರ್ಯನಾರಾಯಣ ದೇವಸ್ಥಾನಕ್ಕೆ ಸಂಪರ್ಕ ರಸ್ತೆ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸುವ ಬಗ್ಗೆ ಸಚಿವರು ಪ್ರಶಂಶೆ ವ್ಯಕ್ತಪಡಿಸಿದರು.

ತಣ್ಣೀರು ಬಾವಿ ಕಡಲ ತೀರಕ್ಕೆ ಸಂಪರ್ಕ ರಸ್ತೆ, ದುರಸ್ತಿ, ಅಗಲೀಕರಣ ಕಾಂಕ್ರಿಟೀಕರಣ, ಚರಂಡಿ ನಿರ್ಮಾಣ, ಸೈಕಲ್ ಟ್ರ್ಯಾಕ್ ನಿರ್ಮಾಣ ಕಾಮಗಾರಿ ಪ್ರಗತಿಯಲಿದ್ದು, ಕಾಮಗಾರಿಗಳನ್ನು ಪೂರ್ಣಗೊಳಿಸುವಲ್ಲಿ ಅಧಿಕಾರಿಗಳು ಎಚ್ಚರವಹಿಸಬೇಕೆಂದು ಅವರು ತಿಳಿಸಿದರು.

ಶಾಸಕರಾದ ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮ (ಕೆ.ಎಸ್.ಟಿ.ಡಿ.ಸಿ) ದ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಾಣಿಕ್ಯ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ವೆಂಕಟೇಶ್, ಅರಣ್ಯ ಸಂರಕ್ಷಣಾಧಿಕಾರಿ ದಿನೇಶ್ ಹಾಗೂ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಯಶವಂತ್ ಮಾತನಾಡಿದರು.

ಅರಣ್ಯ ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.

…..

 

*22ರಂದು ಡಿಸಿಸಿ ಸಭೆ*

ಮಂಗಳೂರು,ಮಾ.19(ಕ.ವಾ):- 2021-22ನೇ ತ್ರೈಮಾಸಿಕ ಜಿಲ್ಲಾ ಸಲಹಾ ಸಮಿತಿ (ಡಿಸಿಸಿ) ಮತ್ತು  ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ (ಡಿಎಲ್‍ಆರ್‍ಸಿ) ಸಭೆಯನ್ನು ಇದೇ ಮಾ.22ರ ಮಂಗಳವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಗಾಗಿದೆ.

ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರ ಉಪಸ್ಥಿತಿಯಲ್ಲಿ ಮಾ.22ರ ಬೆಳಿಗ್ಗೆ 10.45ಕ್ಕೆ ಜಿಲ್ಲಾ ಸಲಹಾ ಸಮಿತಿ (ಡಿಸಿಸಿ) ಸಭೆ ಹಾಗೂ ಬೆಳಿಗ್ಗೆ 11.45ಕ್ಕೆ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ (ಡಿಎಲ್‍ಆರ್‍ಸಿ) ನಡೆಯಲಿದೆ ಎಂದು ಲೀಡ್ ಮ್ಯಾನೇಜರ್ ಪ್ರವೀಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*21ರಂದು ನೇರ ನೇಮಕಾತಿ*

ಮಂಗಳೂರು,ಮಾ.19(ಕ.ವಾ):- ಇಲ್ಲಿನ ಮಹಾನಗರ ಪಾಲಿಕೆಯ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜಿಲ್ಲಾ ಉದ್ಯೋಗ ಕೇಂದ್ರದ ವತಿಯಿಂದ ಮುತ್ತೂಟ್ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಕೋಜೆಂಟ್ ಇ-ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗಳಿಂದ ಇದೇ ಮಾ.21ರ ಸೋಮವಾರ ಬೆಳಿಗ್ಗೆ 10.30 ರಿಂದ 12.30ರ ವರೆಗೆ ನೇರ ನೇಮಕಾತಿ ಹಮ್ಮಿಕೊಳ್ಳಲಾಗಿದೆ.

ಪಿ.ಯು.ಸಿ ಹಾಗೂ ಯಾವುದೇ ಪದವಿಯಲ್ಲಿ ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ನೇಮಕಾತಿಯಲ್ಲಿ ಭಾಗವಹಿಸಬಹುದಾಗಿದೆ ಹಾಗೂ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2457139ನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*ಇಂದು ವಿದ್ಯುತ್ ವ್ಯತ್ಯಯ*

ಮಂಗಳೂರು,ಮಾ.19(ಕ.ವಾ):- ನಗರದ 110/33/11 ಕೆವಿ ಬೈಕಂಪಾಡಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.

 

ಆದ ಕಾರಣ ಇದೇ ಮಾ.20ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಟೆಲಿಫೆÇೀನ್ ಎಕ್ಸ್‍ಚೇಂಜ್, ವಿಜಯ ನಟ್ಸ್, ಇ.ಎಲ್.ಎಫ್ ಗ್ಯಾಸ್, ತೋಕೂರು, ಕುಳಾಯಿ, ಲೆಮಿನಾ, ಮಲಬಾರ್ ಆಕ್ಸಿಜನ್, ವಾಟರ್ ಸಪ್ಲೈ ಮತ್ತು ರಹೆಜಾ, ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾ, ಬೈಕಂಪಾಡಿ, ಅಂಗರಗುಂಡಿ, ಕುಡುಂಬೂರು, ಎ.ಪಿ.ಎಂ.ಸಿ ಮಾರ್ಕೆಟ್, ನಿತ್ಯನಗರ, ಪ್ರೀತಿನಗರ, ಸಣ್ಣನಗರ, ಪ್ರಗತಿನಗರ, ಎಂ.ಎಸ್.ಇ.ಝೆಡ್ ಕಾಲೊನಿ, 62ನೇ ತೋಕೂರು, ರಾಮನಗರ, ವಿಷ್ಣುಮೂರ್ತಿ ದೇವಸ್ಥಾನ, ಶಿವಗಿರಿನಗರ, ರಾಘವೇಂದ್ರ ಮಠ, ಮಿತ್ತೊಟ್ಟು ಕಾಲೊನಿ, ದ್ವಾರಕನಗರ, ಕುಳಾಯಿ, ಹೊಸಬೆಟ್ಟು  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ  ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

*21ರಂದು ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣೆ*

*ಕಾರ್ಯಪಡೆ ಅಧ್ಯಕ್ಷರ ಜಿಲ್ಲಾ ಪ್ರವಾಸ*

ಮಂಗಳೂರು,ಮಾ.19(ಕ.ವಾ):- ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣೆ ಕಾರ್ಯಪಡೆಯ ಅಧ್ಯಕ್ಷರಾದ ರವಿ ಕುಶಾಲಪ್ಪ (ಸಂಪುಟ ಸಚಿವ ಸ್ಥಾನಮಾನ)ಅವರು ಜಿಲ್ಲೆಯಲ್ಲಿ ಮಾ.21ರ ಸೋಮವಾರ ಒಂದು ದಿನದ ಪ್ರವಾಸ ಕೈಗೊಂಡಿದ್ದಾರೆ.

ಅವರು ಮಾ.21ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ, 12 ಗಂಟೆಗೆ ಡಾ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ಉಜಿರೆಯ ಶ್ರೀ. ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ವಿಚಾರ ಸಂಕಿರಣವನ್ನು ನಡೆಸುವ ಬಗ್ಗೆ ಸಂದರ್ಶನ ನಡೆಸಲಿದ್ದಾರೆ.

 ಮಧ್ಯಾಹ್ನ 3 ಗಂಟೆಗೆ ಉಜಿರೆ ಕಾಲೇಜು ಪ್ರಾಂಶುಪಾಲರ ಕೊಠಡಿಯಲ್ಲಿ ವಿಚಾರ ಸಂಕಿರಣ ಏರ್ಪಡಿಸುವ ಕುರಿತಾಗಿ ಪೂರ್ವಭಾವಿಯಾಗಿ ಕಾಲೇಜು ಪ್ರಾಂಶುಪಾಲರು, ಸಸ್ಯಶಾಸ್ತ್ರ ಪ್ರಾಧ್ಯಾಪಕರು, ಮಂಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಉಜಿರೆಯಿಂದ ಮಡಿಕೇರಿಗೆ ತೆರಳಲಿದ್ದಾರೆ ಎಂದು ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆಯ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು