7:22 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ರವಿ ಡಿ. ಚೆನ್ನಣ್ಣನವರ್ ಸಹಿತ 12 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ 

09/06/2021, 19:00

ಬೆಂಗಳೂರು(reporterkarnataka news): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ರವಿ ಡಿ. ಚೆನ್ನಣ್ಣನವರ್, ಹನುಮಂತ ರಾವ್, ಆರ್. ಚೇತನ್ ಸೇರಿದಂತೆ 12 ಮಂದಿ ಐಪಿಎಸ್ ಅಧಿಕಾರಿಗಳನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿ ಆಗಿದ್ದ ರವಿ ಡಿ. ಚೆನ್ನಣ್ಣನವರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ಸಿಐಡಿಗೆ ವರ್ಗಾಯಿಸಲಾಗಿದೆ. ಉಡುಪಿ ಕೋಸ್ಟಲ್ ಸೆಕ್ಯುರಿಟಿ ಪೊಲೀಸ್ ನ ಎಸ್ಪಿಯಾಗಿದ್ದ ಆರ್. ಚೇತನ್ ಅವರನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠರಾಗಿ ನೇಮಿಸಲಾಗಿದೆ. ಕೋಲಾರ ಜಿಲ್ಲಾ ಸುಪರಿಟೆಂಟ್ ಆಫ್ ಪೊಲೀಸ್ ಆಗಿದ್ದ ಕಾರ್ತಿಕ್ ರೆಡ್ಡಿ ಅವರನ್ನು ಬೆಂಗಳೂರಿನ ವಯರ್ ಲೆಸ್ ವಿಭಾಗಕ್ಕೆ ಎಸ್ಪಿ ಆಗಿ ವರ್ಗಾಯಿಸಲಾಗಿದೆ. ಬೆಂಗಳೂರಿನ ಅಪರಾಧ ತನಿಖಾ ವಿಭಾಗದ ಎಸ್ಪಿಯಾಗಿದ್ದ ರಾಹುಲ್ ಕುಮಾರ್ ಎಸ್. ಅವರನ್ನು ತುಮಕೂರು ಜಿಲ್ಲೆ ಎಸ್ ಪಿ ಆಗಿ ನೇಮಿಸಲಾಗಿದೆ. ದಾವಣಗೆರೆ ಜಿಲ್ಲಾ ಎಸ್ಪಿ ಹನುಮಂತರಾಯ ಅವರನ್ನು ಹಾವೇರಿ ಜಿಲ್ಲಾ ಎಸ್ಪಿ ಆಗಿ ವರ್ಗಾಯಿಸಲಾಗಿದೆ. ಒಟ್ಟು 12 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರಕಾರ ಆದೇಶ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು