7:50 PM Wednesday27 - November 2024
ಬ್ರೇಕಿಂಗ್ ನ್ಯೂಸ್
ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​

ಇತ್ತೀಚಿನ ಸುದ್ದಿ

ನಂದಿನಿ ಹಾಲಿನ ದರ ಶೀಘ್ರ ಏರಿಕೆ: ಸುಳಿವು ಕೊಟ್ಟ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 

21/03/2022, 08:59

ಬೆಂಗಳೂರು(reporterkarnataka.com): ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆಯಿಂದಾಗಿ ಒತ್ತಡದಲ್ಲಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಕಾದಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಕೂಡ ಏರಿಕೆಯಾಗುವ ಸಾಧ್ಯತೆ ಇದೆ.ಈ ಬಗ್ಗೆ ಸ್ವತಃ ಕರ್ನಾಟಕ ಹಾಲು ಒಕ್ಕೂಟ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದು, ನಂದಿನಿ ಹಾಲಿನ ದರ ಹೆಚ್ಚಳಕ್ಕೆ 14 ಜಿಲ್ಲೆಗಳ ಹಾಲಿನ ಒಕ್ಕೂಟದವರು ಒತ್ತಡ ಮಾಡ್ತಿದ್ದಾರೆ. ಹಾಲಿನ ದರ ಹೆಚ್ಚಳ ಮಾಡಬೇಕು ಅದನ್ನೇ ರೈತರಿಗೆ ನೀಡುತ್ತೇವೆ ಎಂದು ಹೇಳಿದ್ದಾರೆ.

ಅದನ್ನೇ ನಾವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಮನವಿ ಮಾಡಿದ್ದೇವೆ. ಸಾಧಕ ಬಾಧಕ ನೋಡಿ ಬಳಿಕ ನಿರ್ಧಾರ ತಗೆದುಕೊಳ್ಳೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೇಳುತ್ತಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇಸಿಗೆ ಕಾಲದಲ್ಲಿ ಹಾಲು ಕಡಿಮೆ ಬರುತ್ತೆ. ಹೀಗಾಗಿ ಹೆಚ್ಚಿನ ದರ ಕೊಟ್ಟರೆ ರೈತರಿಗೆ ಅನುಕೂಲ ಆಗುತ್ತೆ. ಬೆಳಗಾವಿಯಲ್ಲಿ

ಆಕಳು ಹಾಲು 23 ರೂಪಾಯಿಯಷ್ಟು ಇತ್ತು 25 ರೂಪಾಯಿ ಮಾಡಿದ್ದೇವೆ‌. ಎಮ್ಮೆ ಹಾಲು 36 ರೂಪಾಯಿ ಇದ್ದದ್ದನ್ನು 38 ರೂಪಾಯಿಗಳಷ್ಟು ಮಾಡಿದ್ದೇವೆ‌‌.

ಇಡೀ ಭಾರತದಲ್ಲೇ ನಾವು ಅತಿ ಕಡಿಮೆ ದರದಲ್ಲಿ ಹಾಲು ಮಾರುತ್ತೇವೆ‌‌. ಬೇರೆಡೆ ಹಾಲಿನ ದರ ಹೆಚ್ಚಿದೆ. ಗ್ರಾಹಕರಿಗೆ ಹೊರೆ ಆಗದ ಹಾಗೇ ಹಾಲಿನ ದರ ಹೆಚ್ಚು ಮಾಡಿದರೆ ರೈತರಿಗೆ ಅನುಕೂಲ ಆಗುತ್ತೆ‌. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯಾವ ನಿರ್ಧಾರ ತಗೆದುಕೊಳ್ಳುತ್ತಾರೆ.

ನೋಡಿ ನಾವು ನಿರ್ಣಯ ಕೈಗೊಳ್ಳುತ್ತೇವೆ ಎಂದು ಜಾರಕಿಹೊಳಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು