8:54 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ರಷ್ಯಾ- ಉಕ್ರೇನ್ ಸಂಘರ್ಷ: ಕ್ಷಿಪಣಿ ದಾಳಿಗೆ ಮೃತಪಟ್ಟ ನವೀನ್ ಪಾರ್ಥಿವ ಶರೀರ ಹಾವೇರಿಗೆ; 20 ದಿನಗಳ ಬಳಿಕ ರವಾನೆ!

21/03/2022, 15:40

ಬೆಂಗಳೂರು(reporterkarnataka.com): ಉಕ್ರೇನ್‌ನಲ್ಲಿ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿಯ ನವೀನ್‌ ಗ್ಯಾನಗೌಡರ ಮೃತದೇಹ ಇಂದು ನಸುಕಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾರ್ಥಿವ ಶರೀರವನ್ನು ಹಾಗೂ ಸಂಬಂಧಿಸಿದ ದಾಖಲೆಗಳನ್ನು ನವೀನ್ ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಕೇಂದ್ರ ಸರ್ಕಾರದ ಆಪರೇಷನ್‌ ಗಂಗಾ ಕಾರ್ಯಾಚರಣೆಯ ಮೂಲಕ ಕರ್ನಾಟಕದ 572 ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಕರೆತರಲಾಗಿದೆ. ನವೀನ್‌ ಮೃತದೇಹ ಇರಿಸಲಾಗಿದ್ದ ಶವಾಗಾರದ ಸಮೀಪದಲ್ಲೇ ದಾಳಿ ನಡೆದಿದ್ದರಿಂದ ಮೃತದೇಹ ತರುವ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು ಎಂದುಕೊಂಡ ಮುಖ್ಯಮಂತ್ರಿ ಬೊಮ್ಮಾಯಿ ಈ ಸಂದರ್ಭದಲ್ಲಿ ಮಾಧ್ಯಮಕ್ಕೆ ತಿಳಿಸಿದರು.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ನಸುಕಿನಲ್ಲಿ ಮೃತದೇಹ ತರಲಾಗಿದೆ. ದುಬೈನಿಂದ ಎಮಿರೇಟ್ಸ್ ಇಕೆ 568 ವಿಮಾನದಲ್ಲಿ ಪಾರ್ಥಿವ ಶರೀರವನ್ನು ರವಾನಿಸಲಾಗಿತ್ತು.

ನಂತರ ಆಂಬುಲೆನ್ಸ್‌ನಲ್ಲಿ ಮೃತದೇಹವನ್ನು ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮಕ್ಕೆ ಕೊಂಡೊಯ್ಯಲಾಯಿತು.  

ನವೀನ್‌ ಪಾರ್ಥಿವ ಶರೀರಕ್ಕೆ ವೀರಶೈವ ಪದ್ಧತಿ ಪ್ರಕಾರ ಪೂಜಾ ಕಾರ್ಯ ನೆರವೇರಿಸಲಾಗುತ್ತದೆ. ಸಂಜೆವರೆಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ದಾವಣಗೆರೆಯ ಎಸ್‌.ಎಸ್‌. ಆಸ್ಪತ್ರೆಗೆ ಮಗನ ಮೃತದೇಹವನ್ನು ದಾನ ಮಾಡುತ್ತೇವೆ’ ಎಂದು ಮೃತ ನವೀನ ಗ್ಯಾನಗೌಡರ ತಂದೆ ಶೇಖರಪ್ಪ ಗ್ಯಾನಗೌಡರ ಈ ಹಿಂದೆ ತಿಳಿಸಿದ್ದರು.

ಮಾರ್ಚ್ 1 ರಂದು ಉಕ್ರೇನ್‌ನ ಹಾರ್ಕಿವ್‌ನಲ್ಲಿ ರಷ್ಯಾ ಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ನವೀನ್‌ ಮೃತಪಟ್ಟಿದ್ದರು. ಮೃತ ಯುವಕ ನಾಲ್ಕನೇ ವರ್ಷದ ವೈದ್ಯಕೀಯ ಕೋರ್ಸ್‌ ಓದುತ್ತಿದ್ದರು. ಒಂದು ವಾರ ಕಾಲ ಬಂಕರ್‌ನಲ್ಲಿ ಇದ್ದ ಅವರು ಹೊರಗೆ ಬಂದಾಗ ಕ್ಷಿಪಣಿ ದಾಳಿಗೆ ಸಿಲುಕಿ ಮೃತಪಟ್ಟಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು