ಇತ್ತೀಚಿನ ಸುದ್ದಿ
ಕೂಡ್ಲಿಗಿ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ
23/03/2022, 09:49
ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com
ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ,ಕಾನೂನು ತಿಳುವಳಿಕೆ ಕಾರ್ಯಾಗಾರ ಜರುಗಿತು.
ನ್ಯಾಯಾಲಯ ಇಲಾಖೆ, ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ಜರುಗಿತು.”ಗ್ರಾಹಕ ರಕ್ಷಣಾ ಕಾಯ್ದೆ ಗ್ರಾಹಕರ ಹಕ್ಕುಗಳು ಮತ್ತು ಜವಾಬ್ದಾರಿ ಗಳು”ಕುರಿತು ಪ್ಯಾನಲ್ ವಕೀಲರಾದ ಜಿ.ಎಮ್.ಮಲ್ಲಿಕಾರ್ಜುನ ಸ್ವಾಮಿ ಉಪನ್ಯಾಸ ನೀಡಿದರು.
ನಂತರ ವಕೀಲರಾದ ಕರಿಬಸವರಾಜ ಮೋಟಾರು ವಾಹನ ಕಾಯ್ದೆ, ವಕೀಲರ ಸಂಘದ ಕಾರ್ಯದರ್ಶಿ ಬಿ.ಸಿದ್ದಲಿಂಗಪ್ಪ ಜನನ ಮತ್ತು ಮರಣ ಪ್ರಮಾಣ ಪತ್ರಗಳ ಮಹತ್ವ ಕುರಿತು ಮಾತನಾಡಿದರು. ಹಿರಿಯ ವಕೀಲರಾದ ಭಾಷಾ ಸಾಹೇಬ್ ಯುವಕರು ಶಿಕ್ಷಣ ಜೊತೆಗೆ ನೈತಿಕ ಶಿಕ್ಷಣ ಹಾಗೂ ನಾಡ ಭಕ್ತಿ ದೇಶಭಕ್ತಿ ಹೊಂದುವಂತೆ ಯುವಕರಿಗೆ ಕರೆ ನೀಡಿ ಜಾಗ್ರತೆ ಮೂಡಿಸುವ ನಿಟ್ಟಿನಲ್ಲಿ ಮಾತನಾಡಿದರು.
ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಪಾಪತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಹೆಚ್ಚುವರಿ ವಕೀಲರಾದ ಕೆ.ಜಿ.ಶಿವಪ್ರಸಾದ್, ವಕೀಲರಾದ ಮಲ್ಲಿಕಾರ್ಜುನ ವೇದಿಕೆಯಲ್ಲಿದ್ದರು.
ಪ್ಯಾನಲ್ ವಕೀಲರಾದ ಸಿ.ವಿರುಪಾಕ್ಷಪ್ಪ ಸ್ವಾಗತ, ನಿರೂಪಣೆ ಹಾಗೂ ವಂದನಾರ್ಪಣೆ ನಿರ್ವಹಿಸಿದರು. ಕಾನೂನು ಸೇವೆಗಳ ಸಮಿತಿ ಸಿಬ್ಬಂದಿ,ನಿಲಯ ಮೇಲ್ವಿಚಾರಕ ಕುಮಾರಸ್ವಾಮಿ ಹಾಗೂ ಸಿಬ್ಬಂದಿ ಹಾಜರಿದ್ದರು.