4:31 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಚಿಕ್ಕೋಡಿಯಲ್ಲಿ ಪ್ರವಾಹ ಮುನ್ನೆಚ್ಚರಿಕೆ: ನದಿ ತೀರಕ್ಕೆ ಎನ್ ಡಿಆರ್ ಎಫ್‌ ತಂಡ ನಿಯೋಜನೆ

10/06/2021, 08:03

ಬೆಳಗಾವಿ(reporterkarnataka news): ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ನದಿಗಳಿಗೆ ಪ್ರವಾಹ ಭೀತಿ ಎದುರಾಗಿದ್ದು, ನದಿ ತೀರದಲ್ಲಿ ಮುಂಜಾಗ್ರತಾ ಕ್ರಮವಾಗಿ ಎನ್ ಡಿಆರ್ ಎಫ್‌ ತಂಡ ನಿಯೋಜಿಸಲಾಗಿದೆ.

ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾ ನದಿ ತೀರದಲ್ಲಿ 21 ಜನರ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜಿಸಲಾಗಿದೆ.

ಯಡೂರ ಗ್ರಾಮಕ್ಕೆ ಈ ಎನ್ ಡಿ ಆರ್‌ಎಫ್‌ತಂಡ ಆಗಮಿಸಿದೆ. ಇಲ್ಲಿಯ ಸಿದ್ಧ ತೀರ್ಥಯಾತ್ರಿ  ನಿವಾಸದಲ್ಲಿ ಬೀಡುಬಿಟ್ಟಿದ್ದಾರೆ. 

ಕೊಂಕಣ ಪ್ರದೇಶಗಳಲ್ಲಿ ಮಳೆ ಪ್ರಾರಂಭವಾಗಿದೆ. ಹೀಗಾಗಿ ಚಿಕ್ಕೋಡಿ ತಾಲೂಕಿನ ಕೃಷ್ಣಾ, ವೇದಗಂಗಾ, ದೂಧಗಂಗಾ ನದಿಗಳಿಗೆ ಸಣ್ಣ ಪ್ರಮಾಣದಲ್ಲಿ ನೀರು ಏರಿಕೆಯಾಗುತ್ತಿದೆ. ಇದು ಪ್ರವಾಹದ ಮುನ್ಸೂಚನೆಯನ್ನು ನೀಡುತ್ತಿದ್ದು, ಈ ಕಾರಣಕ್ಕಾಗಿ ಯಾವುದೇ ಪ್ರಾಣ ಹಾನಿ ಆಗದಂತೆ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಮುಂಜಾಗ್ರತಾ ಕ್ರಮವಾಗಿ ಈ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು