11:16 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮತ್ತೆರಡು ಬ್ಯಾಂಕ್ ಗಳ ಶೀಘ್ರ ಖಾಸಗೀಕರಣ?: ನೀತಿ ಆಯೋಗ ಶಿಫಾರಸು; ಕಳೆದ ಬಜೆಟ್ ನಲ್ಲೇ ಸೂಚನೆ ನೀಡಿದ್ದ ವಿತ್ತ ಸಚಿವೆ

10/06/2021, 08:14

ನವದೆಹಲಿ(reporterkarnataka news): ಕೇಂದ್ರ ಸರಕಾರದ ಬ್ಯಾಂಕ್ ಗಳ ಖಾಸಗೀಕರಣದ ಪ್ರಕ್ರಿಯೆ ಮುಂದುವರೆದಿದ್ದು, ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಶೀಘ್ರದಲ್ಲೇ ಖಾಸಗೀಕರಣಗೊಳ್ಳುವ ಸಾಧ್ಯತೆಗಳಿವೆ. ನೀತಿ ಆಯೋಗ ಈ ಕುರಿತು ಶಿಫಾರಸು ಮಾಡಿದೆ.

ಕೇಂದ್ರ ಸರಕಾರದ ‘ಆತ್ಮ ನಿರ್ಭರ್ ಭಾರತ‘ದ ಅನ್ವಯ ಖಾಸಗೀಕರಣದ ಬಗ್ಗೆ ನಿರ್ದೇಶನಗಳನ್ನು ನೀಡುವ ಹೊಣೆ ‘ನೀತಿ ಆಯೋಗ‘ದ ಮೇಲಿದೆ. ಬಂಡವಾಳ ಹೂಡಿಕೆ ಮತ್ತು ಸಾರ್ವಜನಿಕ ಸೊತ್ತು ನಿರ್ವಹಣೆ ಇಲಾಖೆ ಹಾಗೂ ಆರ್ಥಿಕ ಸೇವಾ ಇಲಾಖೆಗಳು ನೀತಿ ಆಯೋಗದ ಶಿಫಾರಸುಗಳನ್ನು ಪರಿಶೀಲಿಸಿ, ಅದನ್ನು ಜಾರಿಗೊಳಿಸುವ ಬಗ್ಗೆ ಕಾನೂನಾತ್ಮಕ ಸಲಹೆ ನೀಡಲಿದೆ.

2020-21ರ ಸಾಲಿನ ಬಜೆಟ್‌ ಮಂಡಿಸುವ ಸಂದರ್ಭದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಆರ್ಥಿಕ ಸಂಕಷ್ಟವನ್ನು ಸರಿದೂಗಿಸುವ ನಿಟ್ಟಿನಲ್ಲಿ ದೇಶದ ಪ್ರತಿಷ್ಠಿತ ಸರಕಾರಿ ಒಡೆತನದ ಸಂಸ್ಥೆಗಳನ್ನು ಖಾಸಗೀಕರಿಸುವ ಬಗ್ಗೆ ಉಲ್ಲೇಖಿಸಿದ್ದರು. ಎರಡು ಸರಕಾರಿ ಬ್ಯಾಂಕುಗಳನ್ನು ಮತ್ತು ಒಂದು ಜನರಲ್ ಇನ್ಸೂರೆನ್ಸ್ ಕಂಪೆನಿಯನ್ನೂ ಖಾಸಗೀಕರಣ ಮಾಡುತ್ತಿರುವುದಾಗಿ ತಿಳಿಸಿದ್ದರು.

ಹಾಲಿ ಆರ್ಥಿಕ ವರ್ಷದಲ್ಲಿ ಶೇರುಗಳ ಮಾರಾಟದಿಂದ 1.75 ಲಕ್ಷ ಕೋಟಿಗಳನ್ನು ಸಂಗ್ರಹಿಸಿಕೊಳ್ಳುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು