9:01 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಎಂಸಿಸಿ ಬ್ಯಾಂಕ್ ನಲ್ಲಿ ಭಾರಿ ಅವ್ಯವಹಾರ ನಡೆದಿದೆಯೆ?: ಸಾಮಾಜಿಕ ಕಾರ್ಯಕರ್ತ ಜೆರಾಲ್ಡ್ ಟವರ್ಸ್ ಹೇಳಿದ್ದೇನು?

24/03/2022, 23:46

ಮಂಗಳೂರು(reporterkarnataka.com):  ಮಂಗಳೂರು ಕೆಥೋಲಿಕ್ ಕೋ- ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಅಧ್ಯಕ್ಷ ಅನಿಲ್ ಕುಮಾರ್ ಲೋಬೋ ಹಾಗೂ ನಿರ್ದೇಶಕ ಜೋಸೆಫ್ ಎಂ. ಅನಿಲ್ ಪತ್ರಾವೋ ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಅಧಿಕಾರವನ್ನು ಸಂಪೂರ್ಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಬ್ಯಾಂಕ್ ಸದಸ್ಯ ಜೆರಾರ್ಡ್ ಟವರ್ಸ್ ಆರೋಪಿಸಿದ್ದಾರೆ. 

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಕ್ಷಣವೇ ಈ ಇಬ್ಬರನ್ನು ಅಧಿಕಾರದಿಂದ ಅನರ್ಹತೆಗೊಳಿಸಬೇಕು ಹಾಗೂ ಇದೆಲ್ಲಕ್ಕೂ ಬೆಂಬಲವಾಗಿ ನಿಂತ ಜನರಲ್ ಮ್ಯಾನೇಜರ್ ಸುನಿಲ್ ಮಿನೇಜಸ್ ಅವರನ್ನು ತಕ್ಷಣದಿಂದ ವಜಾಗೊಳಿಸಬೇಕು. ಸಹಕಾರ ಸಂಘಗಳ ರಿಜಿಸ್ಟ್ರಾರ್ ತಕ್ಷಣವೇ ಇವರ ವಿರುದ್ಧ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು. ಇಲ್ಲದೇ ಹೋದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಎಂಸಿಸಿ ಬ್ಯಾಂಕ್ ನ ಪ್ರಸ್ತುತ ಅಧ್ಯಕ್ಷ ಅನಿಲ್ ಲೋಬೋ ತಮ್ಮ ಸ್ನೇಹಿತರಿಗೆ ಕೋಟ್ಯಂತರ ರೂಪಾಯಿ ಸಾಲ ನೀಡಿದ ಮರುಕ್ಷಣದಲ್ಲೇ ಅದರಲ್ಲಿ ನಿಗದಿತ ಮೊತ್ತ ಅನಿಲ್ ಲೋಬೋ ಹಾಗೂ ಅವರ ಪತ್ನಿ ಹೆಸರಿಗೆ ಜಮಾವಣೆ ಆಗಿದೆ. ಅಲ್ಲದೇ ಬ್ಯಾಂಕ್ ನಲ್ಲಿ ನೇಮಿಸಲಾದ ಐಟಿ ವಿಭಾಗದ ಸಿಬ್ಬಂದಿಗಳು ಅನಿಲ್ ಲೋಬೋ ಅವರ ನಿಕಟ ಸಂಬಂಧಿಗಳಾಗಿದ್ದಾರೆ ಎಂದು ಜೆರಾರ್ಡ್ ಅಂಕಿ ಅಂಶ ಸಮೇತ ಆರೋಪಿಸಿದ್ದಾರೆ. ಈ ಬಗ್ಗೆ ಆರ್.ಬಿ.ಐ ಗಮನಕ್ಕೂ ಬಂದಿದ್ದು ರಿಸರ್ವ್ ಬ್ಯಾಂಕಿನ ಮೇಲ್ವಿಚಾರಣ ಇಲಾಖೆಯು ತನಿಖೆಗಾಗಿ ರಿಜಿಸ್ಟ್ರಾರ್ ಅವರಿಗೆ ಸೂಚಿಸಿದ್ದರೂ ತನಿಖೆ ನಡೆದಿಲ್ಲ. ಇನ್ನೊಂದೆಡೆ ನಿರ್ದೇಶಕ ಜೋಸೆಫ್ ಎಂ. ಅನಿಲ್ ಪತ್ರಾವೋ ಕೂಡಾ ಸ್ನೇಹಿತರೋರ್ವರಿಗೆ ಸೂಕ್ತ ದಾಖಲೆಗಳಿಲ್ಲದೇ ಕೋಟ್ಯಂತರ ರೂಪಾಯಿ ಸಾಲ ನೀಡಿದ್ದಾರೆ. ಈ ಮೂಲಕ ಇವರಿಬ್ಬರು ಆರ್.ಬಿ.ಐ ಹಾಗೂ ಆರ್.ಸಿ,ಎಸ್. ನಿಯಮಗಳನ್ನು ಉಲ್ಲಂಘಿಸಿದ್ದಾಗಿ ತಿಳಿಸಿದ್ದಾರೆ.

ಅವ್ಯವಹಾರದ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಶಾಸಕರಾದ ವೇದವ್ಯಾಸ ಕಾಮತ್, ಯು.ಟಿ. ಖಾದರ್ ಅವರಿಗೂ ಪತ್ರ ಬರೆಯಲಾಗಿದ್ದು, ಆದರೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಟವರ್ಸ್ ತಿಳಿಸಿದರು.

ಸ್ಟೀವನ್ ಡಿಸೋಜ, ಯೂಜಿನ್ ಲೋಬೋ ಉಪಸ್ಥಿತರಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು