3:35 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಾಯುಭಾರ ಕುಸಿತ: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮಾರ್ಚ್ 28ರವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ

25/03/2022, 09:55

ಬೆಂಗಳೂರು(reporterkarnataka.com) : ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. 

ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

24 ರಿಂದ 28 ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ 24, 25 ರಂದು ಗುಡುಗು ಸಿಡಿಲಿನ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂ.ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ 24 ರಿಂದ 26 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು