10:03 AM Wednesday27 - November 2024
ಬ್ರೇಕಿಂಗ್ ನ್ಯೂಸ್
ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ…

ಇತ್ತೀಚಿನ ಸುದ್ದಿ

ಯುಗಾದಿ ಬಳಿಕ ರಾಜ್ಯ ಬಿಜೆಪಿಯಲ್ಲಿ ಹೊಸ ಯುಗ ಆರಂಭ?: ಅಂಗಾರ, ಕೋಟಾ ಸಹಿತ ಡಜನಿಗೂ ಹೆಚ್ಚು ಸಚಿವರಿಗೆ ಕೋಕ್ ?

25/03/2022, 16:07

ರಾಜೀವಿಸುತ ಬೆಂಗಳೂರು
info.reporterkarnataka@gmail.com

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಈಗಿಂದೀಗಲೇ ಸಿದ್ಧತೆ ನಡೆಸುವಂತೆ ಬಿಜೆಪಿ ಹೈಕಮಾಂಡ್ ರಾಜ್ಯಕ್ಕೆ ಸೂಚಿಸಿದೆ. ಇದರ ಭಾಗವಾಗಿ ರಾಜ್ಯ ಸಚಿವ ಸಂಪುಟದ ಪುನರ್ ರಚನೆ ನಡೆಯಲಿದೆ. ಯುಗಾದಿ ನಂತರ ಸಂಪುಟ ಸರ್ಜರಿ ನಡೆಯಲಿದೆ. 12ಕ್ಕೂ ಹೆಚ್ಚು ಹಾಲಿ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲು ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ. 

ಪಂಚ ರಾಜ್ಯ ಚುನಾವಣೆ ಫಲಿತಾಂಶದಿಂದ ಪುಳಕಿತಗೊಂಡ ಬಿಜೆಪಿ ಹೈಕಮಾಂಡ್ ಕರ್ನಾಟಕದಲ್ಲಿ ನಿಚ್ಚಳ ಬಹುಮತದಿಂದ ಮುಂದಿನ ಚುನಾವಣೆಯನ್ನು ಗೆಲ್ಲುವ ಪ್ಲಾನ್ ಹಾಕಿದೆ. ಇದರ ಮೊದಲ ಭಾಗ ಎನ್ನುವಂತೆ ಸಂಪುಟದ ಮೇಜರ್ ಸರ್ಜರಿಗೆ ಮುಂದಾಗಿದೆ. ಪಕ್ಷ ಸಂಘಟನೆಗೆ ಉತ್ತೇಜನ ನೀಡದ, ಕೊಟ್ಟ ಖಾತೆಯನ್ನು ಸರಿಯಾಗಿ ನಿಭಾಯಿಸದ ಸಚಿವರುಗಳನ್ನು ಕೈಬಿಟ್ಟು ಬೇರೆಯವರಿಗೆ ಅವಕಾಶ ನೀಡಲು ಮುಂದಾಗಿದೆ. ಕೈಬಿಡುವ ಸಚಿವರ ಪಟ್ಟಿಯಲ್ಲಿ

ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮೊದಲ ಸ್ಥಾನದಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಹಿಜಾಬ್ ನಂತರದ ಪರಿಸ್ಥಿತಿಯನ್ನು ನಿಭಾಸುವಲ್ಲಿ ಗೃಹ ಸಚಿವರು ವಿಫಲರಾಗಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಅದಲ್ಲದೆ ವಿಧಾನ ಸಭೆ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಉದ್ದೇಶಿಸಿ,- ‘ಕೊಟ್ಟ ಕುದುರೆಯನ್ನು ಏರಲಾಗದವನು ವೀರನೂ ಅಲ್ಲ, ಶೂರನೂ ಅಲ್ಲ’ ಎಂದು ಹೇಳಿರುವುದು ಆಡಳಿತ ಪಕ್ಷಕ್ಕೆ ಮುಜುಗರ ಉಂಟು ಮಾಡಿತ್ತು. ಅರಗ ಜತೆಗೆ ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ ಅವರು ಹೆಸರು

ಕೂಡ ಸೇರಿದೆ. ಗೋವಿಂದ ಕಾರಜೋಳ ಅವರ ಮೇಲೆ ಯಾವುದೇ ಆರೋಪ ಇಲ್ಲದಿದ್ದರೂ ವಯಸ್ಸಾದ ಹಿನ್ನೆಲೆಯಲ್ಲಿ ನಿಷ್ಕ್ರಿಯತೆ ಹೊಂದಿರುವುದು ಅವರು ಸಂಪುಟದಿಂದ ಹೊರಬೀಳಲು ಪ್ರಮುಖ ಕಾರಣವಾಗಲಿದೆ. ಕೆ.ಎಸ್. ಈಶ್ವರಪ್ಪ ಅವರು ಪ್ರತಿ ಬಾರಿಯೂ ಬಿಜೆಪಿ ಸರಕಾರದಲ್ಲಿ ಸಚಿವ ಸ್ಥಾನವನ್ನು ಅನುಭವಿಸಿದವರಾಗಿದ್ದಾರೆ. ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬಳಿಕ ಬೊಮ್ಮಾಯಿ ಸಂಪುಟದಲ್ಲಿ ಅವರಿಗೆ ಸ್ಥಾನ ಇಲ್ಲವೆಂದೇ ನಿರ್ಧರಿಸಲಾಗಿತ್ತು. ಅಷ್ಟರಲ್ಲಿ ದಕ್ಷಿಣ ಕನ್ನಡದ ಪ್ರಭಾವಿ ಆರೆಸ್ಸೆಸ್ ನಾಯಕರೊಬ್ಬರನ್ನು ಭೇಟಿಯಾಗಿ ಸಂಪುಟ ಸೇರುವಲ್ಲಿ ಯಶಸ್ವಿಯಾಗಿದ್ದರು. ಇನ್ನು ಸಚಿವೆ ಶಶಿಕಲಾ ಜೊಲ್ಲೆ ಅವರ ಮೇಲೆ ಶಾಲಾ ಮಕ್ಕಳ ಮೊಟ್ಟೆ ವಿತರಣೆ ಸಂಬಂಧಿಸಿದಂತೆ ಅವ್ಯವಹಾರ ನಡೆಸಿದ ಆರೋಪವಿದೆ. ಜೊಲ್ಲೆ ಅವರಿಗೆ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಬಾರದು ಎಂಬ ಕೂಗು ಕೇಳಿ ಬಂದಿತ್ತು. ದಿಲ್ಲಿಗೆ ದೌಡಾಯಿಸಿದ ಜೊಲ್ಲೆ ಅವರು ಹೈಕಮಾಂಡ್ ಮೇಲೆ ಪ್ರಭಾವ ಬೀರಿ ಸಂಪುಟ ಸೇರುವಲ್ಲಿ ಯಶಸ್ವಿಯಾಗಿದ್ದರು. ಬೊಮ್ಮಾಯಿ ಸಂಪುಟ ಪ್ರಮಾಣ ಸ್ವೀಕಾರದ 

ದಿನ ಜೊಲ್ಲೆ ಅವರು ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾಗಿ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ದೌಡಾಯಿಸಿದ್ದರು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರನ್ನು ಜೀರೋ ಟ್ರಾಫಿಕ್ ನಲ್ಲಿ ಪ್ರಮಾಣ ವಚನ ಸ್ವೀಕಾರ ನಡೆಯುತ್ತಿದ್ದ ಸ್ಥಳಕ್ಕೆ ಕರೆದು ತರಲಾಗಿತ್ತು.

ಕೊನೆಯ ಕ್ಷಣದಲ್ಲಿ ಶಶಿಕಲಾ ಜೊಲ್ಲೆ ಅವರು ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಈ ಬಾರಿ ಅವರನ್ನು ಉಳಿಸಿಕೊಳ್ಳುವ ಯಾವುದೇ ಲಕ್ಷಣ ಕಂಡು ಬರುತ್ತಿಲ್ಲ. ಅದೇ ರೀತಿ ದಕ್ಷಿಣ ಕನ್ನಡದಿಂದ ಎಸ್. ಅಂಗಾರ ಹಾಗೂ ಉಡುಪಿಯಿಂದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಂಪುಟದಿಂದ ಕೈಬಿಡಲಾಗುವುದು ಎಂಬ ಮಾಹಿತಿ ಇದೆ. ಕೋಟಾ ಅವರಿಗೆ ವಿಧಾನ ಪರಿಷತ್ ಸಭಾಧ್ಯಕ್ಷ ಸ್ಥಾನ

ನೀಡಲಾಗುವುದು. ಇನ್ನು ಅಂಗಾರ ಅವರಿಂದ ತೆರವಾಗುವ ಸ್ಥಾನವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ನೀಡಲಾಗುವುದು. ಕೋಟಾ ಅವರ ಬದಲಿಗೆ ಹಾಲಾಡಿ ಶ್ರೀನುವಾಸ ಶೆಟ್ಟಿ ಅವರಿಗೆ ಸಚಿವ ಸ್ಥಾನ ಒದಗಲಿದೆ ಎನ್ನಲಾಗಿದೆ. ಇದರ ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಮಾತು ಕೇಳಿ ಬರುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು