10:43 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸ್ತ್ರೀ ಶಕ್ತಿ ಸ್ವಸಹಾಯ ಸಂಘ ಸದಸ್ಯರ  ಉತ್ಪಾದನೆಗಳಿಗೆ ನೇರ ಮಾರುಕಟ್ಟೆ: ಸಂಜೀವಿನಿ ಮಾಸಿಕ ಸಂತೆಗೆ ಚಾಲನೆ

25/03/2022, 19:53

ರಾಹುಲ್ ಅಥಣಿ ಬೀದರ್

info.reporterkarnataka@gmail.com

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೀದರ್

ಜಿಲ್ಲಾ ಪಂಚಾಯತ್, ಚಿಟಗುಪ್ಪ ತಾಲ್ಲೂಕು ಪಂಚಾಯತ್ ನ  ಸಂಯುಕ್ತ ಆಶ್ರಯದಲ್ಲಿ ಬೀದರನ ಮನ್ನಾ ಏ ಖೇಳಿ ಗ್ರಾಮದಲ್ಲಿ ಗ್ರಾಮದ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆಗೆ ಗಳಿಗೆ ನೇರ ಮಾರುಕಟ್ಟೆ ಒದಗಿಸುವ ಸಲುವಾಗ ಮಾಸಿಕ ಸಂಜೀವಿನಿ ಸಂತೆಯನ್ನು ಏರ್ಪಡಿಸಲಾಯಿತು.

ಈ ಸಂತೆಯಲ್ಲಿ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆ ಮಾಡಿದ ವಸ್ತುಗಳ ಪ್ರದರ್ಶನ  ಮತ್ತು ಮಾರಾಟ ಮಾಡಲಾಯಿತು. ಸಂಜೀವಿನಿ ಮಾಸಿಕ ಸಂತೆಗೆ ಚಾಲನೆ ನೀಡಿದ ತಾಲ್ಲೂಕಾ ಯೋಜನಾ ಅಧಿಕಾರಿ ಶಂಕರ ಬಿ. ಕನಕ ಮಾತನಾಡಿ, ಸಂತೆಗಳನ್ನು ಏರ್ಪಡಿಸುವದರಿಂದ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆ ಮಾಡಿದ ಉತ್ಪಾದನೆ ಗಳಿಗೆ ಯೋಗ್ಯ ವಾದ ಬೆಲೆ ಸಿಗುವಂತಾಗಿದೆ. ಇದರ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆಯುವಂತೆ ಮನವಿ ಮಾಡಿದರು. 

ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಮನ್ನಾ ಏ ಖೇಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಳಾದ ಭಾಗ್ಯಜೋತಿ ಮಾತನಾಡಿ, ಈ ಸಂತೆ ಯಿಂದ ಮಹಿಳೆಯರು ಸ್ವಾವಲಂಬಿಯಾಗುವದಕ್ಕೆ ಸಹಕಾರಿಯಾಗುತ್ತದೆ.  ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು ಈ  ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿ ಕೊಂಡರೆ ಮಾಸಿಕ ಸಂಜೀವಿನಿ ಸಂತೆಯನ್ನು ಮುಂಬರುವ ದಿನಗಳಲ್ಲಿ ಪ್ರತಿ ವಾರಕ್ಕೊಮ್ಮೆ ಪ್ರಾರಂಬಿಸುವ ಪ್ರಯತ್ನ ಮಾಡುವುದಾಗಿ ಹೇಳಿದರು.


ಗ್ರಾಮ ಪಂಚಾಯತ್ ಅಧ್ಯಕ್ಷ ಗುಂಡಮ್ಮ ನಾಟಿಕಾರ ಹಾಗೂ ಗ್ರಾಮದ ಮುಖಂಡರು ಮತ್ತು ಸ್ತ್ರೀ ಶಕ್ತಿ ಸ್ವಸಹಾಯ ಗುಂಪಿನ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು