4:17 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರೈತರಿಗೆ ಬರೇ 2 ತಾಸು ವಿದ್ಯುತ್!: ಪೂರಕ ವಿದ್ಯುತ್ ನೀಡದ ಹೆಸ್ಕಾಂ ವಿರುದ್ಧ ಅಥಣಿ ರೈತರ ಆಕ್ರೋಶ

25/03/2022, 22:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ಉಪ ವಿಭಾಗ ಜಂಬಗಿ ಸೆಕ್ಷನ್ ವಿಭಾಗದ ನಾಗನೂರ್ ಪಿಎ ಹಾಗೂ ಸಂಬರಗಿ ಗ್ರಾಮದ ರೈತರಿಗೆ ಬರಿ 2 ಗಂಟೆ ವಿದ್ಯುತ್ ನೀಡುತ್ತಿರುವ ಹಿನ್ನೆಲೆ ಪೂರಕ ವಿದ್ಯುತ್ ನೀಡುವಂತೆ ಸ್ಥಳೀಯ ರೈತರು ಬೇಡಿಕೆ ಮುಂದಿಟ್ಟಿದ್ದಾರೆ.


ವಿದ್ಯುತ್ ನೀಡುವಲ್ಲಿ ತಾರತಮ್ಯವೇಕೆ? ಮೊದಲೇ ಬರಗಾಲ ಭವಣೆಯಲ್ಲಿ ಬೆಯುತ್ತಿರುವ ನಮಗೆ ಯಾಕಿ ಅನ್ಯಾಯ ಮಾಡುತ್ತಿದ್ದೀರಿ? ಅಲ್ಪ ನೀರಿನಲ್ಲಿ ಸ್ವಲ್ಪ ಬೆಳೆ ನಿರ್ವಹಣೆ ಮಾಡುತ್ತಿರುವ ನಮಗೆ ಪೂರಕ ವಿದ್ಯುತ್ ನೀಡದೆ ಇದ್ದಲ್ಲಿ ನೀವು ನಿಮ್ಮ ಕಂಬ- ವಯರ್ ಗಳನ್ನು ಕಿತ್ತು ಹಾಕಿ.ನಮಗ್ಯಾಕೆ ನಿಮ್ಮ ಕರೆಂಟು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಸಿಗೆ ಬಿಸಿಲಿನ ತಾಪಕ್ಕೆ ಬೆಳೆಗಳು ನೀರಿಲ್ಲದೆ ಒಣಗಿ ನಿಂತಿವೆ. ವಿದ್ಯುತ್ ಕಡಿತದಿಂದ ರೈತರಿಗೆ ಸಾಕಷ್ಟು ತೊಂದರೆ ಆಗುತ್ತಿದ್ದು, ಆದಷ್ಟು ಬೇಗ ಹೆಸ್ಕಾಂ ಅಧಿಕಾರಿಗಳು ಗಮನ ಹರಿಸಿ ರೈತರಿಗೆ ಸ್ಪಂದಿಸ ಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು