11:46 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಉಡುಪಿ: ವಿದ್ಯಾರ್ಥಿನಿ ಚಲಾಯಿಸುತ್ತಿದ್ದ ಕಾರು ಬೈಕಿಗೆ ಡಿಕ್ಕಿ: ಸವಾರ ಮೆಡಿಕಲ್ ಶಾಪ್ ಮಾಲಿಕ ಸಾವು

26/03/2022, 20:39

ಉಡುಪಿ(reporterkarnataka.com): ವಿದ್ಯಾರ್ಥಿನಿಯೊಬ್ಬಳು ಚಲಾಯಿಸುತ್ತಿದ್ದ ಕಾರು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೆಡಿಕಲ್ ಶಾಪ್ ನ ಮಾಲೀಕರೊಬ್ಬರು ಮೃತಪಟ್ಟ ದಾರುಣ ಘಟನೆ ಪರ್ಕಳದಲ್ಲಿ ಶನಿವಾರ ನಡೆದಿದೆ.

ಮೃತಪಟ್ಟವರನ್ನು ವಾಮನ ನಾಯಕ್ ಎಂದು ಗುರುತಿಸಲಾಗಿದೆ.

ತಕ್ಷಣ ಗಾಯಾಳುವನ್ನು ಉಡುಪಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಘಟನೆ ವಿವರ: ವಾಮನ ನಾಯಕ್ ಅವರು ಬೆಳಿಗ್ಗೆ 8 ಗಂಟೆಗೆ ತನ್ನ ಮಗನನ್ನು ಉಡುಪಿಯಲ್ಲಿ ಬಿಟ್ಟು ಬೈಕ್ ನಲ್ಲಿ ಪರ್ಕಳದ ತಮ್ಮ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ವಿದ್ಯಾರ್ಥಿನಿ ಅದಿತಿ ಉಡುಪ ಎಂಬವರು ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ವಾಮನ ನಾಯಕ್ ತಲೆಗೆ ಗಂಭೀರ ಗಾಯವಾಗಿತ್ತು. ಅಪಘಾತ ನಡೆದ ಬಳಿಕ ವಿದ್ಯಾರ್ಥಿನಿ ಕಾರು ನಿಲ್ಲಿಸದೆ ಪರಾರಿಯಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಳಿಕ ಕಾರಿನ ನಂಬರ್ ಮೂಲಕ ಅಪಘಾತ ನಡೆಸಿದ ವಿದ್ಯಾರ್ಥಿನಿ ಹಾಗೂ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು