10:25 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನ ದಿನಾಚರಣೆ

26/03/2022, 23:15

ಮಂಗಳೂರು(reporterkarnataka.com): ದಕ್ಷಿಣ ಕನ್ನಡ  ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಯೇನಪೋಯ ವಿಶ್ವವಿದ್ಯಾನಿಲಯ, ಯೇನಪೋಯ  ನರ್ಸಿಂಗ್ ಕಾಲೇಜ್, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಾಗೂ ರೆಡ್ ರಿಬ್ಬನ್ ಕ್ಲಬ್ ಮತ್ತು ರೆಡ್ ಕ್ರಾಸ್, ಜಿಲ್ಲಾ ರಕ್ತ ನಿಧಿ ಕೇಂದ್ರ, ವೆನ್ ಲಾಕ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನ ದಿನಾಚರಣೆ ಯೇನಪೋಯ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಬ್ಲಡ್ ಬ್ಯಾಂಕ್ ವೆನ್ ಲಾಕ್ ನ ವೈದ್ಯಾಧಿಕಾರಿ ಡಾ.ಶರತ್ ಕುಮಾರ್ ಮಾತನಾಡಿ, ರಕ್ತದಾನ ಬಹಳ ಮುಖ್ಯವಾದದ್ದು, ಒಬ್ಬ ಪುರುಷ ತಿಂಗಳಲ್ಲಿ ಮೂರು ಬಾರಿ ರಕ್ತದಾನ ಮಾಡಿದರೆ ನಿಮ್ಮಿಂದ ಐದು ಸಾವಿರ  ಜೀವಗಳನ್ನು ಉಳಿಸಬಹುದು. ನಿಮ್ಮ ಹುಟ್ಟುಹಬ್ಬದಂದು ರಕ್ತ ದಾನ ಮಾಡಿ ಇನ್ನೊಬ್ಬರ ಬಾಳಿಗೆ ಬೆಳಕಾಗಿ ಎಂದು ಕಿವಿ ಮಾತು ಹೇಳಿದರು.


ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ ಮಾತನಾಡಿ, ಮಾನವನ ರಕ್ತದಲ್ಲಿ ಮೈಕ್ರೋ ಪ್ಲಾಸ್ಟಿಕ್ ನ ಅಂಶ ಕಂಡು ಬಂದಿದೆ ಎಂದು ನೆದರ್ ಲ್ಯಾಂಡ್ ನ ಸಂಶೋಧನಾ ಮಂಡಳಿ ವರದಿ ಮಾಡಿದೆ. ಹಾಗಾಗಿ ಪ್ಲಾಸ್ಟಿಕ್ ಬಳಕೆ ಆದಷ್ಟು ಕಡಿಮೆ ಮಾಡಿ ಎಂದು ಕರೆ ನೀಡಿದರು.

ಯೇನಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಲೀನಾ.ಕೆ.ಸಿ ಅಧ್ಯಕ್ಷತೆ ವಹಿಸಿದ್ದರು.


ಯೇನಪೋಯ ನರ್ಸಿಂಗ್ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್ ನ ಯೋಜನಾಧಿಕಾರಿ ನವ್ಯ,ರೆಡಿಕ್ರಾಸ್ ಕೋಡಿನೆಟರ್, ಆರೋಗ್ಯ ಇಲಾಖೆಯ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸತತವಾಗಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು