2:18 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Good News: ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಯುಗಾದಿ ಹಬ್ಬಕ್ಕೆ ಕೆಎಸ್ಸಾರ್ಟಿಸಿ ವಿಶೇಷ ಬಸ್ ವ್ಯವಸ್ಥೆ

27/03/2022, 08:51

ಬೆಂಗಳೂರು(reporterkarnataka.com);ಯುಗಾದಿ ಹಬ್ಬಕ್ಕೆ ಕೆಎಸ್ಸಾರ್ಟಿಸಿ ಪ್ರಯಾಣಿಕರಿಗಾಗಿ ಸಿಹಿ ಸುದ್ದಿ ನೀಡಿದೆ. ರಾಜಧಾನಿ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರಿಗೆ ಹೆಚ್ಚುವರಿಯಾಗಿ 600 ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದೆ.

ಬೆಂಗಳೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಮಂಗಳೂರು, ಮೈಸೂರು, ಶಿವಮೊಗ್ಗ, ತಮಿಳುನಾಡು ಹಾಗೂ ಕೇರಳ ಕಡೆಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಆನ್ ಲೈನ್ ಮೂಲಕ ಮುಂಗಡವಾಗಿ ಟಿಕೆಟ್ ಬುಕ್ ಮಾಡಬಹುದಾಗಿದ್ದು, 4-5 ಜನರು ಒಟ್ಟಾಗಿ ಟಿಕೆಟ್ ಬುಕ್ ಮಾಡಿದಲ್ಲಿ ಶೇ.5ರಷ್ಟು ರಿಯಾಯಿತಿ ಹಾಗೂ ಹೋಗುವ ಹಾಗೂ ಬರುವ ಟಿಕೆಟ್ ಮುಂಗಡ ಕಾಯ್ದಿರಿಸಿದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುತ್ತಿದೆ.

ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದು ಕೆ.ಎಸ್.ಆರ್.ಟಿ.ಸಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು