8:33 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಆಲ್ಕೋಡ ಗ್ರಾಮ ಪಂಚಾಯಿತಿನಲ್ಲಿ ಭಾರಿ ಭ್ರಷ್ಟಾಚಾರ: ನಕಲಿ ಬಿಲ್ ಸೃಷ್ಟಿಸಿ 10 ಲಕ್ಷ ರೂ. ಗುಳುಂ: ನಡೆಯದ ಕಾಮಗಾರಿಯ ಹೆಸರಿನಲ್ಲೂ ಬಿಲ್! 

10/06/2021, 16:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮ ಪಂಚಾಯಿತಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸುಮಾರು 10 ಲಕ್ಷ ರೂ. ವಂಚಿಸಿದ ಆರೋಪ ಕೇಳಿ ಬಂದಿದೆ. ಈ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿಗೂ ದೂರು ನೀಡಲಾಗಿದೆ. 

ಆಲ್ಕೋಡ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ  ಪ್ರಕರಣ ಬೆಳಕಿಗೆ ಬಂದಿದ್ದು, ಸುಮಾರು 10 ಲಕ್ಷ ರೂ. ಗುಳಂ ಮಾಡಿರುವ ಆರೋಪ ಕೇಳಿ ಬಂದಿದೆ. ಶಾವಂತಗಲ್ ಗ್ರಾಮದ ಬೀದಿ ದೀಪಗಳ ಹೆಸರಿನಲ್ಲಿ 50 ಸಾವಿರ ರೂಪಾಯಿ, ಕುಡಿಯುವ ನೀರಿನ ನಿರ್ವಹಣೆಗೆ 40 ಸಾವಿರ ರೂ. ಹಾಗೂ ಇತರ ನಡೆಯದ ಕಾಮಗಾರಿಯ ನಕಲಿ ದಾಖಲೆ ಸೃಷ್ಟಿಸಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹನುಮಂತ ಶಾವಂತಗಲ್ ಹಾಗೂ  ಗ್ರಾಮ ಪಂಚಾಯಿತಿನ ಇತರ ಐವರು ಸದಸ್ಯರು ಆರೋಪಿಸಿದ್ದಾರೆ.

ಆಲ್ಕೋಡ ಗ್ರಾಮಗಳಲ್ಲಿ ಫಾಗಿಂಗ್ ನಡೆಸಿದ ಹೆಸರಿನಲ್ಲೂ ಹಣ ದುರುಪಯೋಗ ಮಾಡಲಾಗಿದೆ. 15ನೇ ಹಣಕಾಸು ಯೋಜನೆಯಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿದನ್ನು ಇತರ ಸದಸ್ಯರ ಗಮನಕ್ಕೆ ತರಲಿಲ್ಲ. ಪಂಚಾಯಿತಿ ಅಧ್ಯಕ್ಷರು ಹಾಗೂ

 ಅಭಿವೃದ್ಧಿ ಅಧಿಕಾರಿ ಸೇರಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು  ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದೂರು ನೀಡಲಾಗಿದೆ. ಅವ್ಯವಹಾರ ಬಗ್ಗೆ ದೂರು ಬಂದಿದೆ. ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಾಪಂ ಕಾರ್ಯನಿರ್ವಾಹಣಾಧಿಕಾರಿ ಪಂಪಾಪತಿ ಹಿರೇಮಠ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು