10:19 PM Saturday10 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಐತಿಹಾಸಿಕ ʼಅಮರನಾಥ ಯಾತ್ರೆʼ ಜೂನ್ 30ರಿಂದ ಆರಂಭ: 43 ದಿನ ಬಾಬಾ ಬರ್ವಾನಿಯ ದರ್ಶನಕ್ಕೆ ಅವಕಾಶ

28/03/2022, 15:31

ಹೊಸದಿಲ್ಲಿ(reporterkarnataka.com): ಐತಿಹಾಸಿಕ ಅಮರನಾಥ ಯಾತ್ರೆ ಜೂನ್ 30ರಿಂದ ಆರಂಭವಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ ತಿಳಿಸಿದೆ.

ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ಇಂದು ಶ್ರೀಅಮರನಾಥಜೀ ದೇವಾಲಯ ಮಂಡಳಿಯ ಸಭೆ ಭಾನುವಾರ ನಡೆಯಿತು.

ಮುಂಬರುವ ಭೇಟಿಗೆ ಸಂಬಂಧಿಸಿದ ವಿವಿಧ ವಿಷಯಗಳನ್ನ ಸಭೆಯಲ್ಲಿ ಆಳವಾಗಿ ಚರ್ಚಿಸಲಾಯಿತು. ಅದ್ರಂತೆ, ಈ ಬಾರಿಯ ಅಮರನಾಥ ಯಾತ್ರೆಯು ಜೂನ್ 30 ರಿಂದ ಪ್ರಾರಂಭವಾಗಿ ರಕ್ಷಾ ಬಂಧನದ ದಿನದಂದು ಸಂಪ್ರದಾಯದಂತೆ ಕೊನೆಗೊಳ್ಳಲು ನಿರ್ಧರಿಸಲಾಗಿದೆ.

ಈ ವರ್ಷ, ಭಕ್ತರು ಸುಮಾರು 43 ದಿನಗಳ ಕಾಲ ಬಾಬಾ ಬರ್ವಾನಿಯ ದರ್ಶನ ಪಡೆಯಲು ಸಾಧ್ಯವಾಗುತ್ತದೆ. ಆದರೆ ಪ್ರಯಾಣದ ಸಮಯದಲ್ಲಿ ಕೋವಿಡ್ ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಕಡ್ಡಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು