9:21 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;…

ಇತ್ತೀಚಿನ ಸುದ್ದಿ

ಎಸ್ಸೆಸೆಲ್ಸಿ ಎಕ್ಸಾಂ: ರಾಜ್ಯದಲ್ಲಿ ಮೊದಲ ದಿನ ಪರೀಕ್ಷೆಗೆ 20 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರು

28/03/2022, 23:32

ಬೆಂಗಳೂರು(reporterkarnataka.com): ರಾಜ್ಯಾದ್ಯಂತ 2021-22ನೇ ಸಾಲಿನಲ್ಲಿ ಎಸೆಸೆಲ್ಸಿಯ ಪ್ರಥಮ ಭಾಷೆ ವಿಷಯದ ಪರೀಕ್ಷೆಯು ಸೋಮವಾರ ನಡೆಯಿತು. ಮೊದಲ ದಿನವೇ 20,994 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದೆ.

ಎಸೆಸೆಲ್ಸಿಯ ಮೊದಲ ದಿನದ ಪರೀಕ್ಷೆಗೆ 8,69,399 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದು, 8,48,405 ವಿದ್ಯಾರ್ಥಿಗಳು ಹಾಜರಾಗಿದ್ದರು. 2020-21ನೇ ಸಾಲಿನಲ್ಲಿ 8,19,398 ವಿದ್ಯಾರ್ಥಿಗಳು ದಾಖಲಾಗಿದ್ದು, ಪರೀಕ್ಷೆಗೆ ಕೇವಲ 3,769 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಈ ವರ್ಷ ಪರೀಕ್ಷೆ ಬರೆದವರ ಸಂಖ್ಯೆ ಶೇ.97.59 ಕುಸಿದಿದ್ದು, ಕಳೆದ ವರ್ಷ ಶೇ.99.54 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. 

ಈ ವರ್ಷ ಪರೀಕ್ಷೆ ಬರೆದ ಅಭ್ಯರ್ಥಿಗಳ ಪೈಕಿ, 8,11,195 ವಿದ್ಯಾರ್ಥಿಗಳು ಮೊದಲಬಾರಿಗೆ ಪರೀಕ್ಷೆಯನ್ನು ಬರೆದಿದ್ದು, ಖಾಸಗಿ ನೋಂದಣಿ ಮಾಡಿಕೊಂಡ 35,509 ವಿದ್ಯಾರ್ಥಿಗಳು, 1,701 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದರು ಎಂದು ಮಂಡಳಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು