12:54 AM Wednesday19 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಬಾಯ್ ಫ್ರೆಂಡ್ ಗಳ ಸಹವಾಸ ಬೇಡವೆಂದು ಬುದ್ದಿ ಹೇಳಿದ ಹೆತ್ತಬ್ಬೆ: ಪಾಪಿ ಅಪ್ರಾಪ್ತ ಪುತ್ರಿ ಆಕೆಯ ಕೊಂದೇ ಬಿಟ್ಲು!

29/03/2022, 11:14

ತೂತುಕುಡಿ(reporterkarnataka.com): ಅಕ್ಕಪಕ್ಕದ ಮನೆಯ ಹುಡುಗರ ಜೊತೆ ಸುತ್ತಾಡುತ್ತಿದ್ದ ಮಗಳಿಗೆ ಬುದ್ಧಿ ಹೇಳಿದ್ದಕ್ಕೆ ಸ್ವಂತ ಅಮ್ಮನೇ ಕೊಲೆ ಮಾಡಿದ 17 ವರ್ಷದ ಬಾಲಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ತೂತುಕುಡಿಯಲ್ಲಿ ಇಂತಹ ಘಟನೆ ನಡೆದಿದ್ದು, 17 ವರ್ಷದ ಬಾಲಕಿ ತನ್ನ ಇಬ್ಬರು ಬಾಯ್​ಫ್ರೆಂಡ್​​ಗಳ ಸಹಾಯದಿಂದ ತಾಯಿಯನ್ನು ಕೊಲೆಮಾಡಿದ್ದಾಳೆ.

ಬಾಲಕಿ ತನ್ನ ನೆರೆಹೊರೆಯ ಕೆಲವು ಯುವಕರೊಂದಿಗೆ ತಿರುಗಾಡುತ್ತಿದ್ದಳು, ಇದರಿಂದ ಮಗಳಿಗೆ ಅಮ್ಮ ಬುದ್ಧಿ ಹೇಳಿದ್ದಕ್ಕೆ ಆಕೆ ತನ್ನ ತಾಯಿಯ ಮೇಲೆ ಕೋಪಗೊಂಡಿದ್ದಳು.ಇದೇ ಕಾರಣಕ್ಕೆ ಅಮ್ಮ-ಮಗಳ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಈ ಕಾರಣಕ್ಕೆ ತನ್ನ ತಾಯಿಯನ್ನೇ ಹತ್ಯೆ ಮಾಡಿದ್ದಾಳೆ.

ಆರಂಭದಲ್ಲಿ ಕೊಲೆ ವಿಚಾರ ತಿಳಿದು ಪೊಲೀಸರು ಬಂದಾಗ ಮುನಿಯಲಕ್ಷ್ಮಿ ಎಂಬ ಮಹಿಳೆ ತಮ್ಮ ಮನೆಯಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿದ್ದರು. ಆಕೆಯ 17 ವರ್ಷದ ಮಗಳು ಮೃತದೇಹದ ಪಕ್ಕದಲ್ಲಿ ಕುಳಿತಿದ್ದಳು ಎನ್ನಲಾಗಿದೆ.

ಈ ಕುರಿತು ವಿಚಾರಿಸಿದಾಗ ಇಬ್ಬರು ವ್ಯಕ್ತಿಗಳು ಮನೆಗೆ ನುಗ್ಗಿ ನನ್ನ ತಾಯಿಯನ್ನು ಕೊಲೆ ಮಾಡಿದ್ದಾರೆ ಎಂದು ಆ ಬಾಲಕಿ ಹೇಳಿದ್ದಳು. ಆದರೆ ಈ ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಿದಾಗ ಇಬ್ಬರು ಬಾಯ್​ಫ್ರೆಂಡ್​ಗಳ ಸಹಾಯದಿಂದ ಹುಡುಗಿ ತನ್ನ ತಾಯಿಯನ್ನು ಕೊಂದಿದ್ದಾಳೆ ಎಂದು ತಿಳಿದುಬಂದಿದೆ.

ಗಂಡನೊಂದಿಗೆ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಮುನಿಯಲಕ್ಷ್ಮಿ ಒಂಟಿಯಾಗಿ ಬೇರೆ ಮನೆಯಲ್ಲಿ ವಾಸಿಸುತ್ತಿದ್ದಳು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. 17 ವರ್ಷದ ಬಾಲಕಿ, ಆಕೆಯ ತಂಗಿ ಮತ್ತು ತಮ್ಮ ಅಪ್ಪನೊಂದಿಗೆ ವಾಸಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು