12:06 AM Wednesday27 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ವಿಧಾನಸಭೆ ಚುನಾವಣೆ: ಸ್ವಂತ ಬಲದಿಂದ ಗೆಲ್ಲೋರಿಗೆ ಬಿಜೆಪಿ ಮೊದಲ ಆದ್ಯತೆ: ಮಿಕ್ಕ ಅಭ್ಯರ್ಥಿಗಳಿಗೆ ಕೋಕ್ ಸಾಧ್ಯತೆ

30/03/2022, 23:16

ಹೊಸದಿಲ್ಲಿ(reporterkarnataka.com): ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಗದ್ದುಗೆ ಹಿಡಿದ ಬಳಿಕ ಬಿಜೆಪಿ ಹೈಕಮಾಂಡ್‌ನ ಮುಂದಿನ ಟಾರ್ಗೆಟ್ ಗುಜರಾತ್ ಮತ್ತು ಕರ್ನಾಟಕ ಆಗಿದ್ದು ಈ ವರ್ಷದ ಅಂತ್ಯಕ್ಕೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ.

ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ತಯಾರಿ ನಡೆಸಿದ್ದು, ರಾಜ್ಯ ಬಿಜೆಪಿಯಲ್ಲಿ ಸ್ವಂತ ಶಕ್ತಿಯಿಂದ ಗೆಲ್ಲುವ ಕುದುರೆಗಳೆಷ್ಟು? ಬಿಜೆಪಿ ಸಿಂಬಲ್‌ನಿಂದ ಗೆಲ್ಲುವವರು ಯಾರು? ಸಿಂಬಲ್ ಮತ್ತು ಸ್ವಂತ ಬಲ ಎರಡೂ ಸೇರಿ ಗೆಲ್ಲುವವರು ಎಷ್ಟು? ಎಂಬುದರ ಬಗ್ಗೆ ರಹಸ್ಯ ಸರ್ವೇ ಮಾಡಲು ಬಿಜೆಪಿ ಹೈಕಮಾಂಡ್ ಅಖಾಡಕ್ಕೆ ಇಳಿದಿದೆ ಎನ್ನಲಾಗಿದೆ.

ಏಪ್ರಿಲ್, ಮೇ, ಜೂನ್ ಮೂರು ತಿಂಗಳು ಮೂರು ಗುಪ್ತ ಸರ್ವೇ ನಡೆಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಸುಳಿವು ನೀಡಿದೆ. ಜುಲೈ ಅಂತ್ಯದ ವೇಳೆಗೆ ಸಂಭವನೀಯ ಪಟ್ಟಿಯಲ್ಲಿ ಯಾರು ಮುಂದೆ, ಯಾರು ಹಿಂದೆ ಇರ್ತಾರೆ ಎಂಬ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣೆಗೆ 11 ತಿಂಗಳು ಬಾಕಿ ಇರುವ ಮೊದಲೇ ಬಿಜೆಪಿ ಹೈಕಮಾಂಡ್‌ನಿಂದ ತಂತ್ರ ರೂಪಿಸಲಾಗುತ್ತಿದ್ದು, ಈಗಾಗಲೇ ಆರ್‌ಎಸ್‌ಎಸ್ ಮುಖಂಡರಿಂದಲೂ ಒಂದು ವರದಿ ರವಾನೆ ಆಗಿದೆ ಎನ್ನಲಾಗಿದೆ. ಸ್ವಂತ ಶಕ್ತಿಯಿಂದ ಗೆಲ್ಲುವವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡೋದು ಬೇಡ ಎಂದು ಆರ್‌ಎಸ್ಎಸ್ ಸಲಹೆ ನೀಡಿದೆ ಅಂತ ಮೂಲಗಳು ಮಾಹಿತಿ ನೀಡಿವೆ.

ಪಕ್ಷದ ಸಿಂಬಲ್‌ನಿಂದ ಗೆಲ್ಲುವ, ಗೆಲ್ಲುತ್ತಿರುವವರ ಆಯ್ಕೆ ವಿಚಾರದಲ್ಲಿ ಈ ಸಲ ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಇಲ್ಲ. ಆದರೆ ಪಕ್ಷ, ಸ್ವಂತ ಬಲ ಎರಡೂ ಸೇರಿಸಿ ಗೆಲ್ಲುವವರಿಗೆ ಟಿಕೆಟ್ ನೀಡುವಾಗ ಎಚ್ಚರ ವಹಿಸುವಂತೆಯೂ ಸಂಘದಿಂದ ಸಲಹೆ ರವಾನೆಯಾಗಿದೆ. ಹಾಗಾಗಿ ಈ ಮೂರು ಅಂಶಗಳನ್ನೊಳಗೊಂಡ ಮೂರು ಸರ್ವೇಗಳ ಬಳಿಕವಷ್ಟೇ ಸಂಭವನೀಯ ಟಿಕೆಟ್ ಪಟ್ಟಿ ರೆಡಿ ಮಾಡಲು ಪ್ಲಾನ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು