ಇತ್ತೀಚಿನ ಸುದ್ದಿ
ಸುರಂಗ ಕೊರೆದು ನೀರು ತಂದ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕರಿಗೆ ಜಿಲ್ಲಾಧಿಕಾರಿ ಸನ್ಮಾನ
31/03/2022, 16:21
ಮಂಗಳೂರು(reporterkarnataka.com): ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ನವದೆಹಲಿಯಿಂದ ಹಿಂತಿರುಗಿದ ಅಮ್ಮೈ ಮಹಾಲಿಂಗ ನಾಯ್ಕರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆತ್ಮೀಯವಾಗಿ ಸನ್ಮಾನಿಸಿದರು.






ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಮಹಾಲಿಂಗ ನಾಯಕರ ಮೊಮ್ಮಗ, ಸ್ನೇಹಿತರು, ಅಭಿಮಾನಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.














