11:13 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕರ್ನಾಟಕದಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

01/04/2022, 10:28

ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ಅವಧಿಗೆ ಪೂರ್ವ ಚುನಾವಣೆಗೆ ಹೋಗುವ ಯಾವುದೇ ಯೋಚನೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದರು.

ಗುಜರಾತ್ ಚುನಾವಣೆಯ ಜೊತೆಗೆ ಕರ್ನಾಟಕದ ಚುನಾವಣೆಯೂ ನಡೆಯಲಿದೆ . ಬೊಮ್ಮಾಯಿ ಸರ್ಕಾರ ಅವಧಿಗೆ ಪೂರ್ಣ ಚುನಾವಣೆಗೆ ಹೋಗುತ್ತದೆ ಎಂಬುವುದು ಕೇವಲ ಊಹಾಪೋಹಗಳು ಎಂದು ಅವರು ತಿಳಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬರುವ ಹಿನ್ನೆಲೆ ರಾಜ್ಯಕ್ಕೆ ಬಂದಿರುವ ಅರುಣ್ ಸಿಂಗ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಆಲೋಚನೆಯೂ ಇಲ್ಲ. ಸದ್ಯ ಯಾವ ರೀತಿಯಲ್ಲಿ ಇದೆಯೋ ಅದೇ ಮಾದರಿಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಸ್ಪಷ್ಟಪಸಿದರು.

ರಾಜ್ಯದಲ್ಲಿ ಬಿಜೆಪಿ ನಾಯಕರು ಲೋಕಪ್ರಿಯರಿದ್ದಾರೆ, ಜನಪ್ರಿಯರಿದ್ದಾರೆ. ಬೊಮ್ಮಾಯಿಯವರು ತಮ್ಮ ಆಡಳಿತ ವೈಖರಿಯಿಂದ ಹೆಸರು ಮಾಡಿದ್ದಾರೆ. ಈ‌ ಆಧಾರದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದರು.

ರಾಹುಲ್‌ಗಾಂಧಿ ಧೈರ್ಯ ಮೆಚ್ಚಬೇಕು.ರಾಹುಲ್ ಗಾಂಧಿ ರಾಜ್ಯ ಭೇಟಿ ಕುರಿತು ಮಾತನಾಡಿದ ಅರುಣ್‌ಸಿಂಗ್, ದೇಶಾದ್ಯಂತ ಕಾಂಗ್ರೆಸ್ ಸೋಲುತ್ತಿದೆ. ಈ ಬಾರಿ ಕರ್ನಾಟಕದಲ್ಲೂ ಕಾಂಗ್ರೆಸ್ ಗೆ ಸೋಲು ಕಟ್ಟಿಟ್ಟ ಬುತ್ತಿ. ಸೋಲಾಗುತ್ತೆ ಅಂತ ಗೊತ್ತಿದ್ದರೂ ರಾಹುಲ್ ಗಾಂಧಿ ಇಲ್ಲಿಗೆ ಬರೋ ಧೈರ್ಯ ತೋರಿಸಿರೋದು ಮೆಚ್ಚಬೇಕಾದದ್ದೇ ಎಂದು ವ್ಯಂಗ್ಯವಾಡಿದರು.

ಬಹಳ ಧೈರ್ಯದಿಂದ ರಾಹುಲ್ ಗಾಂಧಿ ಇಲ್ಲಿಗೆ ಬಂದಿದ್ದಾರೆ. ಅವರು ಬಂದು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿ. ಆದರೆ, ಅವರ ನೇತೃತ್ವದಲ್ಲಿ ಯಾವುದೂ ನೆಟ್ಟಗೆ ನಡೀತಿಲ್ಲ, ಅವರಿಂದ ಹೊಸದೇನನ್ನೂ ಮಾಡುವುದಕ್ಕೆ ಆಗುತ್ತಿಲ್ಲ. ಕಾಂಗ್ರೆಸ್ ದೇಶದಲ್ಲಿ ಎಲ್ಲಾ ಕಡೆ ಸೋಲುತ್ತದೆ. ಅದರಂತೆ ಮುಂದೆ ಕರ್ನಾಟಕದಲ್ಲಿಯೂ ಸೋಲುತ್ತದೆ ಎಂದು ಭವಿಷ್ಯ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು