ಇತ್ತೀಚಿನ ಸುದ್ದಿ
ಮಹಾರಾಷ್ಟ: ನಾಳೆಯಿಂದ ನೋ ಮಾಸ್ಕ್ , ನೋ ಕೋವಿಡ್ ರೂಲ್ಸ್..!
01/04/2022, 12:46
ಮುಂಬೈ(reporterkarnataka.com);
ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದು, ಮೂರನೇ ಅಲೆ ಸಂಪೂರ್ಣವಾಗಿ ಹತೋಟಿಗೆ ಬಂದಿದೆ. ಹೀಗಾಗಿ, ಏಪ್ರಿಲ್ 2ರಿಂದ ಮಹಾರಾಷ್ಟ್ರದಲ್ಲಿ ಕೋವಿಡ್ ಮೇಲಿನ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸುವುದಾಗಿ ಉದ್ದವ್ ತಾಕ್ರೆ ಕ್ರೆ ನೇತೃತ್ವದ ಶಿವಸೇನೆ ಸರ್ಕಾರ ಘೋಷಿಸಿದೆ.
ಮಾಸ್ಕ್ ಹಾಕಿಕೊಳ್ಳುವುದು ಕೂಡಾ ಕಡ್ಡಾಯವಲ್ಲ ಎಂದಿದೆ.ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ, ಕಳೆದ ಕೆಲ ವಾರಗಳಿಂದ ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳಲ್ಲಿ ಗಣನೀಯವಾದ ಇಳಿಕೆ ಕಂಡು ಬಂದಿದೆ. ಹೀಗಾಗಿ ಏಪ್ರಿಲ್ 2ರಿಂದ ಕೋವಿಡ್ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಲು ತೀರ್ಮಾನಿಸಲಾಗಿದೆ. ಆದರೆ ಜನರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬಾರದು ಎಂಬ ಉದ್ದೇಶದಿಂದ ಅಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.