3:15 AM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ತುಮಕೂರು: 115 ಮಕ್ಕಳಿಗೆ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಹೆಸರು ನಾಮಕರಣ

01/04/2022, 17:26

ತುಮಕೂರು(reporterkarnataka.com): ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯ 115ನೇ ಜಯಂತ್ಯುತ್ಸವ ಪ್ರಯುಕ್ತ 115 ಮಕ್ಕಳಿಗೆ ಸ್ವಾಮೀಜಿಯವರ ಹೆಸರು ನಾಮಕರಣ ಮಾಡುವ ಕಾರ್ಯಕ್ರಮ ಮಠದ ಆವರಣದಲ್ಲಿ ಶುಕ್ರವಾರ ನಡೆಯಿತು

ರಾಜ್ಯದ ವಿವಿಧ ಜಿಲ್ಲೆಗಳಿಂದ ಮಠಕ್ಕೆ ಆಗಮಿಸಿ ಮಕ್ಕಳಿಗೆ ನಾಮಕರಣ ಮಾಡುವುದರ ಜೊತೆಗೆ ಮಕ್ಕಳಿಗೆ ಬೇಕಾದ ತೊಟ್ಟಿಲು, ಹಾಸಿಗೆ ಸೇರಿದಂತೆ ಇತರೆ ಪರಿಕರಗಳನ್ನು ಉಚಿತವಾಗಿ ವಿತರಿಸಲಾಯಿತು. ಬೆಂಗಳೂರಿನ ಶಿವಕುಮಾರ ಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್‌ನಿಂದ ಮಕ್ಕಳಿಗೆ ನಾಮಕರಣ ಮಾಡಲಾಯಿತು. 

ಬೀದರ್, ರಾಯಚೂರು ಸೇರಿದಂತೆ ಎಲ್ಲ ಭಾಗದಿಂದ ಎಲ್ಲ ಧರ್ಮದ ಮಕ್ಕಳು ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಡ ಮಕ್ಕಳಿಗೆ ನಾಮಕರಣ ಮಾಡುವ ಮೂಲಕ ಮಕ್ಕಳಿಗೆ ಬೇಕಾದ ಎಲ್ಲ ಪರಿಕರಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಅನ್ನದಾನ ಸೇವಾ ಟ್ರಸ್ಟ್ ಅಧ್ಯಕ್ಷ  ಜಯಣ್ಣ ಹೇಳಿದರು.

ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಯ ಹೆಸರು ನಾಮಕರಣ ಮಾಡುವ ಮೂಲಕ ಸ್ವಾಮೀಜಿಯ ಹೆಸರನ್ನು ಎಲ್ಲ ಕಡೆ ಹರಡುವ ಕೆಲಸ ಮಾಡಲಾಗುತ್ತಿದೆ. ಕಳೆದು 3 ವರ್ಷಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಟ್ರಸ್ಟ್‌ನ ಸದಸ್ಯೆ ಅನುರಾಧ ವಿ.ಪಾಟೀಲ್ 

ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು