11:35 AM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ದೇವರ ಮನೆ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ: ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

01/04/2022, 23:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ದೇವರಮನೆ ರಸ್ತೆಯಲ್ಲಿ ಕಾಡಾನೆಯೊಂದು ಕಾಣಿಸಿಕೊಂಡು ದೇವರಮನೆಗೆ ಹೋಗಿ ಹಿಂದಿರುಗುತ್ತಿದ್ದ ಪ್ರಯಾಣಿಕರೊಬ್ಬರು ಕೂದಲೆಳೆ ಅಂತರದಲ್ಲಿ ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ.

ಬಕ್ಕಿ ಗ್ರಾಮದ ಸುರೇಂದ್ರ ಎಂಬುವವರು ಕುಟುಂಬದವರೊಂದಿಗೆ ದೇವರಮನೆ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ರಸ್ತೆಯಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದವರು ಕಾರಿನ ಹೆಡ್‍ಲೈಟ್ ಆಪ್ ಮಾಡಿ ಕಾರನ್ನು ಕೆಲಕಾಲ ರಸ್ತೆಯಲ್ಲೆ ನಿಲ್ಲಿಸಿಕೊಂಡಿದ್ದಾರೆ. ಕಾಡಾನೆ ಕಾರಿನ ಸಮೀಪವೇ ಬಂದು ಕೆಲ ಕಾಲ ನಿಂತಿದ್ದು ನಂತರ ಕಾಡಿನ ಕಡೆಗೆ ಸಾಗಿದೆ. 

ದೇವರ ಮನೆ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಿದ್ದು ರಾತ್ರಿ  ಸಮಯದಲ್ಲಿ ಸಂಚರಿಸಲು ಪ್ರಯಾಣಿಕರು ಭಯಪಡುವಂತಾಗಿದೆ. ಕಾಡಾನೆಯಿಂದ ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ಈ ಬಗ್ಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು