8:19 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಯುಗಾದಿ ಟ್ವೀಟ್ ನಲ್ಲಿ ಮಾಜಿ ಸಿಎಂ ಎಚ್ ಡಿಕೆ ಹೇಳಿದ್ದೇನು?: ಬಿಜೆಪಿಗೆ ಅವರು ಮಾಡಿದ ಪಾಠವೇನು

02/04/2022, 16:09

ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಎಚ್‌. ಡಿ ಕುಮಾರಸ್ವಾಮಿ 
ಅವರು ಯುಗಾದಿ ಪ್ರಯುಕ್ತ ಟ್ವೀಟ್ ಮಾಡಿದ್ದಾರೆ.

ಪ್ರಸಕ್ತ ವಿದ್ಯಮಾನಗಳ ಉಲ್ಲೇಖಿಸಿ, ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿಗೆ ವಿರುದ್ಧವಾಗಿ ಟ್ವೀಟ್ ಮಾಡಿದ್ದಾರೆ. 

ಮಾಜಿ ಮುಖ್ಯಮಂತ್ರಿಗಳು ಯುಗಾದಿ ಪರ್ವದಿನದಂದು ನಾವೆಲ್ಲ ಸಂಕಲ್ಪ ಮಾಡೋಣ ಎಂದು ಕೆಲವು ಸಂದೇಶವನ್ನು ಸಮಾಜಕ್ಕೆ ರವಾನೆ ಮಾಡುವ ಮೂಲಕವಾಗಿ ಹಬ್ಬ ಶುಭಾಶಯ ಕೋರಿದ್ದಾರೆ.

ಎಚ್ ಡಿಕೆ ಟ್ವೀಟ್‍ನಲ್ಲಿ ಏನಿದೆ?: ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ. ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ. ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ.

ಕುರ್ಚಿ ಹಿಡಿಯಲು ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಟ್ಟು ಮನೆ ಮುರುಕರೂ ಆಗುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ಹಿಂದುತ್ವದ ವಿನಾಶ ಮಾಡುತ್ತಿರುವ ಈ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಿ.


ತಲೆತಲಾಂತರಗಳಿಂದ ಯುಗಾದಿ ಇದೆ. ವರ್ಷತೊಡಕೂ ಇದೆ, ಹಲಾಲೂ ಇದೆ. ಹಲಾಲ್ ಹಾಲಾಹಲವನ್ನು ಈಗ ಸೃಷ್ಟಿಸಲಾಗಿದೆ. ಹಲಾಲು, ಜಟ್ಕಾ ಎಂದು ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಹಿಂದುತ್ವ ಹೆಸರಿನಲ್ಲಿ ರಾಜಕೀಯ ಜನ್ಮ ಪಡೆದು ರಕ್ಕಸರೂಪದಲ್ಲಿ ಬೆಳೆದಿರುವ ಪಕ್ಷದ ಬಾಲಂಗೋಚಿಗಳಿವು. ಇವರು ನೈಜ ಹಿಂದುಗಳೇ ಅಲ್ಲ ತಲೆತಲಾಂತರಗಳಿಂದ ಇಲ್ಲದ ಆಹಾರ ತಾರತಮ್ಯ ಈಗೇಕೆ ಬಂತು? 150 ಸ್ಥಾನಗಳ ಗುರಿ ಮುಟ್ಟಲು ರೂಪಿಸಿದ ರೋಡ್ ಮ್ಯಾಪ್ ಇದೇ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಸರ್ವಸಮಾನ, ಸರ್ವಹಕ್ಕು, ಸರ್ವಕಲ್ಯಾಣ ಅಂದರೆ ಸರ್ವೇ ಜನಾಃ ಸುಖಿನೋ ಭವಂತು ಎಂಬ ಆಶಯವುಳ್ಳ ಸಂವಿಧಾನವನ್ನೇ ಮುಗಿಸುವ ರಕ್ಕಸ ಹುನ್ನಾರಕ್ಕೆ ಇದು ನಾಂದಿಯಷ್ಟೇ.

ಇತ್ತೀಚಿನ ಸುದ್ದಿ

ಜಾಹೀರಾತು