3:17 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಅಂತರ್ ಜಿಲ್ಲಾ ದರೋಡೆಕೋರರ ಬಂಧನ: 4.65 ಲಕ್ಷ ರೂ. ಮೌಲ್ಯದ ಸೊತ್ತು ವಶ: ಅಥಣಿ ಪೊಲೀಸರ ಕಾರ್ಯಾಚರಣೆ

11/06/2021, 15:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಡಿವೈಎಸ್ ಪಿ ಎಸ್. ವಿ. ಗಿರೀಶ್ ಮತ್ತು ಅಥಣಿ ಸಿಪಿಐ ಶಂಕರಗೌಡ ಬಸನಗೌಡರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 10 ಮಂದಿ ಅಂತರ್ ಜಿಲ್ಲಾ ದರೋಡೆಕೋರರನ್ನು  

ಅಥಣಿ ಪೋಲಿಸರು ಬಂಧಿಸಿದ್ದು, 4.65 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.

ಕಾವಲುಗಾರನನ್ನು ಕಟ್ಟಿ ಹಾಕಿ ದರೋಡೆ ಮಾಡಿದ್ದ ಪ್ರಕರಣ ಇದಾಗಿದೆ. 10 ಮಂದಿ ಆರೋಪಿಗಳಿಂದ5 ಬೈಕ್, 1 ಕಾರು ಮತ್ತು ಗ್ಯಾಸ್ ಕಟರ್ ವಶಪಡಿಸಿಕೊಳ್ಳಲಾಗಿದೆ. 

ಅಥಣಿ ಪಟ್ಟಣದ ನಂದಗಾಂವ ರಸ್ತೆಯಲ್ಲಿ ವೆಂಕಟೇಶ್ವರ ವೈನ್ಸನಲ್ಲಿ ಈ ದರೋಡೆ ಪ್ರಕರಣ ನಡೆದಿತ್ತು. ಅಥಣಿ ತಾಲೂಕಿನ ರಡ್ಡೇರಟ್ಟಿ ಗ್ರಾಮದ

ರಾಜು ಗಳತಗಿ, ಸಂಜು ಗಳತಗಿ, ಮಹಂತೇಶ್ ಗಳತಗಿ, ಅಲಖನೂರ ಗ್ರಾಮದ ಶಿವಾನಂದ,  ಸಿರಗಣ್ಣವರ. ಉಮೇಶ ಅಲಿಯಾಸ್ ಪಿಂಟು ಗಡ್ಡಿ ,ರಾಮಚಂದ್ರ ಬಿಸನಾಳ,ಸಿದ್ದರಾಮ ಪಾಟಿಲ,ಜಯವಂತ ಲಗಳಿ,ಆಕಾಶ ಲಗಳಿ,ಸುನೀಲ ಗಡ್ಡಿ  ಬಂಧಿತ ಆರೋಪಿಗಳು. ಇವರಿಂದ 1. 50 ಲಕ್ಷ ರೂ. ಮೌಲ್ಯದ 30 ಬಾಕ್ಸ್ ಮದ್ಯ, 2 ಲಕ್ಷ ಮೌಲ್ಯದ ಕಾರು,120000 ಮೌಲ್ಯದ 5 ಬೈಕ್ ಸೇರಿದಂತೆ 4. 65 ಲಕ್ಷ ರೂ. ಮೌಲ್ಯದ ಸರಂಜಾಮು ಜಪ್ತಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು