7:54 AM Wednesday27 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನ : ಮುಖ್ಯಮಂತ್ರಿ ಬೊಮ್ಮಾಯಿ

03/04/2022, 20:07

ಬೆಂಗಳೂರು(reporterkarnataka.com): ಹನುಮನ ಜನ್ಮಸ್ಥಳ ಹಂಪಿ ಬಳಿಯ ಅಂಜನಾದ್ರಿ ಶ್ರೀಕ್ಷೇತ್ರವನ್ನ ಅಭಿವೃದ್ಧಿಪಡಿಸಲು ಸರಕಾರ ತೀರ್ಮಾನಿಸಿದ್ದು, ಈ ಉದ್ದೇಶಕ್ಕಾಗಿ 100 ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ಒದಗಿಸಲಾಗಿದೆ. ಇದೇ ವರ್ಷ ಯೋಜನೆ ಸಿದ್ದಪಡಿಸಿ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಶ್ರೀರಾಮಸೇವಾ ಮಂಡಳಿ ಆಯೋಜಿಸಿರುವ ಸಂಗೀತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಯ ಕೆಲಸ ಈ ವರ್ಷವೇ ಪ್ರಾರಂಭವಾಗಲಿದೆ. ವಿಶಿಷ್ಟವಾದ ಅಭಿವೃದ್ಧಿ ಕಾರ್ಯಕ್ರಮವನ್ನು ಪ್ರಮುಖರ ಸಲಹೆ ಮೇರೆಗೆ ತೆಗೆದುಕೊಳ್ಳಲು ತೀರ್ಮಾನಿಸಿದೆ. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ ತಿಳಿದಿರುವ ತಜ್ಞರ ಹೆಸರುಗಳನ್ನು ಒದಗಿಸಲು ಮನವಿ ಮಾಡಲಾಗಿದೆ ಎಂದರು.

ಶ್ರೀ ರಾಮ ಸೇವಾ ಮಂಡಳಿಯವರು ಸ್ಥಾಪಿಸಲು ಉದ್ದೇಶಿಸಿರುವ ಕಲಾ ಸಾಕೇತ್ ಸ್ಥಾಪನೆಗೆ ಸರಕಾರ ನೆರವು ಒದಗಿಸುವುದು ಎಂದು ಭರವಸೆ ನೀಡಿದರು.

ಸಂಗೀತ ಅವಿಭಾಜ್ಯ ಅಂಗ: ಪ್ರತಿಶಬ್ಧಕ್ಕೂ ತನ್ನದೇ ರಾಗತಾಳವಿರುತ್ತದೆ. ಸಂಗೀತ ಮನುಷ್ಯನ ಸಂಗೀತ ಉತ್ಸಾಹ, ಆನಂದ, ಸಮಾಧಾನ, ಭಾವನೆಗಳನ್ನು ಅಭಿವ್ಯಕ್ತಿ ಪಡಿಸುವ ಮಾಧ್ಯಮವೂ ಹೌದು. ದಣಿದಾಗ ಸಂಗೀತ ಕೇಳಿದರೆ ಆಹ್ಲಾದ ಉಂಟಾಗುತ್ತದೆ ಎಂದರು.

ಕಳೆದ 8 ದಶಕಗಳಿಂದ ಶ್ರೀರಾಮನವಮಿ ಸಂದರ್ಭದಲ್ಲಿ ಸಂಗೀತೋತ್ಸವ ಆಯೋಜಿಸುತ್ತಿರುವ ಶ್ರೀರಾಮ ಸೇವಾ ಮಂಡಳಿಯ ಎಲ್ಲರೂ ಅಭಿನಂದನಾರ್ಹರು. ಸಂಗೀತದಿಂದ ಉತ್ತಮವಾಗಿ ಭಕ್ತಿಯ ಅಭಿವ್ಯಕ್ತಿಯಾಗುತ್ತದೆ. ಕೆಲವು ಭಕ್ತಿ ಗೀತೆಗಳು ಅತ್ಯಂತ ಪ್ರಭಾವಶಾಲಿಯಾಗಿರುತ್ತದೆ. ನಾನು ಶ್ರೀರಾಮ ಹಾಗೂ ಹನುಮನ ಭಕ್ತ. ಅದರೊಂದಿಗೆ ಸಂಗೀತದ ಭಕ್ತನೂ ಹೌದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು