6:38 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಏ.8: ಡಾ.ಪ್ರಭಾಕರ್ ನೀರ್‌ಮಾರ್ಗ ಅವರ ಕಾದಂಬರಿ ’ಕಣ್ಮಣಿ’ ಬಿಡುಗಡೆ

06/04/2022, 20:38

ಮಂಗಳೂರು(reporterkarnataka.com) : ಹಿರಿಯ ಸಾಹಿತಿ ಡಾ.ಪ್ರಭಾಕರ್ ನೀರ್‌ಮಾರ್ಗ ಅವರ 27ನೇ ಕೃತಿ  ’ಕಣ್ಮಣಿ’ ಕಾದಂಬರಿಯು ಏ.8 ರಂದು ಬಿಡುಗಡೆಗೊಳ್ಳಲಿದೆ.

ನಗರದ ಬಂಟ್ಸ್ ಹಾಸ್ಟೇಲ್ ಸಮೀಪದ ಮ್ಯಾಪ್ಸ್ ಕಾಲೇಜಿನಲ್ಲಿ ತುಳು ಪರಿಷತ್ ವತಿಯಿಂದ ಶುಕ್ರವಾರ ಅಪರಾಹ್ನ 3.೦೦ ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ  ಮಂಗಳೂರು ವಿ.ವಿ .ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಉದಯ ಬಾರ್ಕೂರ್ ಅವರು ಕೃತಿ ಬಿಡುಗಡೆ ಮಾಡುವರು. 

ತುಳು ಪರಿಷತ್ ಗೌರವ ಅಧ್ಯಕ್ಷ ಸ್ವರ್ಣ ಸುಂದರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮ್ಯಾಪ್ಸ್ ಕಾಲೇಜು ಅಧ್ಯಕ್ಷ  ದಿನೇಶ್ ಕುಮಾರ್ ಆಳ್ವಾ ಹಾಗೂ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಬಿ.ಶೆಟ್ಟಿ ಅವರು ಅತಿಥಿಗಳಾಗಿ ಭಾಗವಹಿಸುವರು. ಮಂಗಳೂರು ವಿ.ವಿ.ಕನ್ನಡ ವಿಭಾಗದ ಸಂಶೋಧನಾ ಸಹಾಯಕ ಚೇತನ್ ಮುಂಡಾಜೆ ಅವರು ಕೃತಿ ಪರಿಚಯ ಮಾಡುವರು ಎಂದು ತುಳು ಪರಿಷತ್ ಪ್ರಧಾನ ಕಾರ್ಯದರ್ಶಿ ಬೆನೆಟ್ ಜಿ. ಅಮನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು