8:25 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ಭಾರತದಲ್ಲಿ ಯಾವುದೇ ಕೋವಿಡ್ 19 ರ ‘XE’ ರೂಪಾಂತರ ಪತ್ತೆಯಾಗಿಲ್ಲ: ಕೇಂದ್ರ ಸರಕಾರ ಸ್ಪಷ್ಟನೆ

06/04/2022, 23:26

ಹೊಸದಿಲ್ಲಿ(reporterkarnataka.com): ಭಾರತದಲ್ಲಿ ಕೋವಿಡ್ 19 ರ ‘ಎಕ್ಸ್‌ಇ’ ರೂಪಾಂತರ ಪ್ರಕರಣಗಳು ವರದಿಯಾಗಿಲ್ಲ ಎಂದು ಕೇಂದ್ರ ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ.

ಮುಂಬೈ ಯಲ್ಲಿ ‘ಎಕ್ಸ್‌ಇ’ ರೂಪಾಂತರ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿತ್ತು, ಇದೀಗ ಕೇಂದ್ರ ವರದಿಗಳನ್ನು ನಿರಾಕರಿಸಿದೆ.

‘ಎಕ್ಸ್‌ಇ’ ರೂಪಾಂತರ ಮಾದರಿಯ ಫಾಸ್ಟ್ಕ್ಯೂ ಫೈಲ್ಗಳನ್ನು ಐಎನ್‌ಎಸ್‌ಎಸಿಒಜಿ ಜೀನೋಮಿಕ್ ತಜ್ಞರು ವಿಶ್ಲೇಷಿಸಿದ್ದಾರೆ. ಅವರು ಈ ರೂಪಾಂತರದ ಜೀನೋಮಿಕ್ ಸಂವಿಧಾನವು ‘ಎಕ್ಸ್‌ಇ’ ರೂಪಾಂತರದ ಜೀನೋಮಿಕ್ ಚಿತ್ರದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಊಹಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹೀಗಾಗಿ ಪ್ರಸ್ತುತ ಲಕ್ಷಣಗಳು COVID-19 ನ ‘XE’ ರೂಪಾಂತರವಾಗಿದೆ ಎಂದು ಸೂಚಿಸುವುದಿಲ್ಲ ಎಂದು ಮೂಲಗಳು ಹೇಳಿವೆ.

ಗ್ರೇಟರ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮಾದರಿಗಳ ನಿಯಮಿತ ಪರೀಕ್ಷೆಯ ಆಧಾರದ ಮೇಲೆಮ್ ಒಬ್ಬ ರೋಗಿಯು ‘ಕಪ್ಪಾ’ ರೂಪಾಂತರದಿಂದ ಮತ್ತು ಇನ್ನೊಬ್ಬರು ‘XE’ ರೂಪಾಂತರದಿಂದ ಪ್ರಭಾವಿತರಾಗಿದ್ದಾರೆ ಎಂದು ಹೇಳಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು